spot_img
spot_img

UNION BUDGET 2025:ಕೇಂದ್ರ ಬಜೆಟ್ನತ್ತ ರಾಜ್ಯ ಸರ್ಕಾರದ ಚಿತ್ತ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಫೆಬ್ರವರಿ 1ರಂದು ಕೇಂದ್ರ BUDGET-2025-26 ಮಂಡನೆಯಾಗಲಿದೆ. ಪ್ರಮುಖವಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಹಲವು ಮಹತ್ವದ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರಾಜ್ಯದ ಹಲವು ಯೋಜನೆಗಳಿಗೆ ಅನುದಾನ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಸಂಬಂಧ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

UNION BUDGET ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕ ಸರ್ಕಾರ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಬೆಂಗಳೂರಿನ ಮಹತ್ವದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ರಾಜ್ಯದ ಹಲವು ಮಹತ್ವದ ಯೋಜನೆಗಳಿಗೆ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದೆ. ಈ ಸಂಬಂಧ ಈಗಾಗಲೇ ಕೇಂದ್ರದ ಮುಂದೆ ಅಧಿಕೃತ ಬೇಡಿಕೆಯ ಪಟ್ಟಿ ಸಲ್ಲಿಸಿದೆ.

Demand for assistance for development projects costing ₹90,000 crore: ಇದರಲ್ಲಿ ಪ್ರಮುಖವಾಗಿ ಟನೆಲ್ ರಸ್ತೆ ಯೋಜನೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗಳು ದೊಡ್ಡ ಪ್ರಮಾಣದ ಅಭಿವೃದ್ಧಿ ಯೋಜನೆಗಳಾಗಿವೆ.

ನಗರದ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್​​ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದ್ದು, ಅವುಗಳಿಗೆ 2025-26ನೇ ಸಾಲಿನ ಕೇಂದ್ರ BUDGET​​​ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.ಬೆಂಗಳೂರಿನ ಸುಮಾರು 90,000 ಕೋಟಿ ರೂ.ಗೂ ಅಧಿಕ ವೆಚ್ಚದ ಮಹತ್ವದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಆರ್ಥಿಕ ನೆರವಿನ ಬೇಡಿಕೆ ಇಟ್ಟಿದೆ.

Request for Grants for City Subway: ಕೆ.ಆರ್.ಪುರ ವೃತ್ತದಿಂದ ನಾಯಂಡನಹಳ್ಳಿ ಜಂಕ್ಷನ್ ವರೆಗೂ 28.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹25 ಸಾವಿರ ಕೋಟಿ ವೆಚ್ಚವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ 19 ಸಾವಿರ ಕೋಟಿ ಮೌಲ್ಯದ ಡಿಪಿಆರ್ ಸಿದ್ಧಪಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ.

ರಾಷ್ಟ್ರೀಯ ಹೆದ್ದಾರಿಗೂ ಈ ಟನೆಲ್ ಸಂಪರ್ಕಿಸುವುದರಿಂದ ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಇವುಗಳಿಗೆ BUDGET​​​ನಲ್ಲಿ ಆರ್ಥಿಕ ನೆರವು ನೀಡುವಂತೆ ಕೋರಲಾಗಿದೆ.ಸಂಚಾರ ದಟ್ಟಣೆ ನಿವಾರಣೆಗಾಗಿ ಟನಲ್ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಬ್ಬಾಳದ ಎಸ್ಟೀಮ್ ಮಾಲ್​ನಿಂದ ಹೆಚ್​​ಎಸ್​ಆರ್ ಬಡಾವಣೆಯ ಸಿಲ್ಕ್ ಬೋರ್ಡ್ ಜಂಕ್ಷನ್​​ವರೆಗೂ ಉತ್ತರ-ದಕ್ಷಿಣ 18.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹15 ಸಾವಿರ ಕೋಟಿ ವೆಚ್ಚವಾಗಲಿದೆ.

Metro Corridor, Double Decker:ನಮ್ಮ ಮೆಟ್ರೋದ ಮೂರನೇ ಹಂತದ ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್​​​ ವರೆಗೂ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಶಸ್ವಿ ಹಿನ್ನೆಲೆಯಲ್ಲಿ ಮೆಟ್ರೋ ನಾಲ್ಕನೇ ಹಂತದ ಯೋಜನೆಯನ್ನು ಡಬಲ್ ಡೆಕ್ಕರ್ ಮೂಲಕ ನಿರ್ಮಿಸಲು ತೀರ್ಮಾನಿಸಲಾಗಿದೆ.

ಜೆ.ಪಿ.ನಗರದಿಂದ ಹೆಬ್ಬಾಳದವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೂ 45 ಕಿ.ಮೀ ಉದ್ದದ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ₹8,916 ಕೋಟಿ ಅಗತ್ಯವಿದ್ದು, ಪೂರಕ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ.ಪ್ರಸಕ್ತ ಮೆಟ್ರೋ ರೈಲು ಮಾರ್ಗಗಳಿಗೆ ಐದು ಕಾರಿಡಾರುಗಳನ್ನು ವಿಸ್ತರಣೆ ಮಾಡಲು ಗುರುತಿಸಲಾಗಿದೆ.

ಸುಮಾರು 129 ಕಿ.ಮೀ. ಮೆಟ್ರೋ ಮಾರ್ಗವನ್ನು ವಿಸ್ತರಿಸಲು ಯೋಜಿಸಲಾಗಿದೆ. ಈ ಉದ್ದೇಶಿತ ವಿಸ್ತರಿತ ಮೆಟ್ರೋ ಕಾರಿಡಾರ್ ಹೊರ ವರ್ತುಲ ರಸ್ತೆ ಹಾಗೂ ಬೆಂಗಳೂರು ಉಪನಗರವನ್ನು ಸಂಪರ್ಕಿಸುತ್ತದೆ. ಈ ಐದು ಮೆಟ್ರೋ ಕಾರಿಡಾರುಗಳಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡುವಂತೆ ಮನವಿ ಮಾಡಲಾಗಿದೆ.

Application for Sanction of Neighboring Regulatory Measures:ನೆರವಿಗಾಗಿ ವಿಶ್ವ ಬ್ಯಾಂಕ್​ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಇಲಾಖೆಗೆ ಸಲ್ಲಿಸಲಾಗಿದೆ.

ಹೀಗಾಗಿ, ಬಹುವೇಗ ಮಂಜೂರಾತಿ ನೀಡುವಂತೆ ಕೋರಿದ್ದಾರೆ.ಬೆಂಗಳೂರಲ್ಲಿ ಮಳೆಯಿಂದಾಗುವ ಅವಘಡ ತಪ್ಪಿಸಲು ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಇದಕ್ಕಾಗಿ ಸುಮಾರು 3,000 ಕೋಟಿ ರೂ.

Grants for construction of 17 flyovers, buffer zone roads:ಇದನ್ನು ತಪ್ಪಿಸಲು ಈ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹3000 ಕೋಟಿ ಅಗತ್ಯವಿದ್ದು, ಪೂರಕ ಅನುದಾನ ನೀಡುವಂತೆ ಕೋರಲಾಗಿದೆ.

ಜೊತೆಗೆ ನಗರದ ಸಂಚಾರಿ ದಟ್ಟಣೆ ಇರುವ 11 ಜಂಕ್ಷನ್​​ಗಳಲ್ಲಿ 99.50 ಕಿ.ಮೀ.ಗಳಷ್ಟು 17 ಮೇಲ್ಸೇತುವೆ ನಿರ್ಮಾಣ ಅಗತ್ಯವಿದ್ದು, ಇದಕ್ಕಾಗಿ ₹12 ಸಾವಿರ ಕೋಟಿ ಹಣ ಬೇಕಾಗಿದೆ. ಪ್ರಮುಖ ನದಿ ಹಾಗೂ ದೊಡ್ಡ ಕೆರೆಗಳು ಹಾಗೂ ರಾಜಕಾಲುವೆ ಪಕ್ಕದ ಬಫರ್ ಪ್ರದೇಶಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ.

Assistance to PRR and Cauvery Project:ಜೊತೆಗೆ, ಕಾವೇರಿ 5ನೇ ಹಂತದ ಕುಡಿಯುವ ನೀರಿನ ಪೂರೈಕೆ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರ್ಣಗೊಳಿಸಲಾಗಿದೆ. ಹೆಚ್ಚುವರಿ ಬೇಡಿಕೆ ಪೂರೈಸಲು ಕಾವೇರಿ 6ನೇ ಹಂತದ ಯೋಜನೆ ಮೂಲಕ 2028ರ ವೇಳೆಗೆ 500 ಎಂಎಲ್​ಡಿ ನೀರು ಪೂರೈಸುವ ಉದ್ದೇಶವಿದ್ದು, ಅನುದಾನಕ್ಕೆ ಬೇಡಿಕೆ ಇಡಲಾಗಿದೆ.

ಬೆಂಗಳೂರಿನ ದಟ್ಟಣೆ ನಿಯಂತ್ರಿಸಲು ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 8 ಪಥಗಳ, 73.04 ಕಿ.ಮೀ ಉದ್ದದ ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

ಈ ಯೋಜನೆಯಲ್ಲಿ ₹21 ಸಾವಿರ ಕೋಟಿ ಭೂಸ್ವಾಧೀನ ಹಾಗೂ ₹6 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಸೇರಿ ಒಟ್ಟು ₹27 ಸಾವಿರ ಕೋಟಿ ಅಗತ್ಯವಿದೆ. ಇದಕ್ಕೆ 3,000 ಕೋಟಿ ರೂ.‌ ನೀಡುವಂತೆ ಕೋರಲಾಗಿದೆ.

Request for release of ₹5,300 crore for Bhadra Upper Bank:ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಅನುಮೋದನೆ ನೀಡಿ ಎಂದು ಮನವಿ ಮಾಡಲಾಗಿದೆ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನ ₹11,495 ಕೋಟಿ ಬಿಡುಗಡೆಗೊಳಿಸಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಗೌರವಧನ ₹5,000 ಮತ್ತು ಅಡುಗೆಯವರು ಮತ್ತು ಸಹಾಯಕರಿಗೆ ₹2,000ಕ್ಕೆ ಹೆಚ್ಚಳಗೊಳಿಸುವಂತೆ ಬೇಡಿಕೆ ಇಡಲಾಗಿದೆ.

ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆಯ ಅನುದಾನ ನೀಡುವಂತೆ ಕೋರಲಾಗಿದೆ. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಈ ಹಿಂದೆಯೇ ಘೋಷಿಸಿದ್ದ ₹5300 ಕೋಟಿ ಬಿಡುಗಡೆಗೂಳಿಸುವಂತೆ ಮನವಿ ಮಾಡಿದ್ದಾರೆ.

 

ಇದನ್ನು ಓದಿರಿ :LOST GOLD CHAIN RETURNED TO OWNER: ಮರಳಿ ವಾರಸುದಾರರಿಗೆ ತಲುಪಿಸಿದ CISF ಸಿಬ್ಬಂದಿ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...