spot_img
spot_img

ಕೆಎಂಎಫ್ : ಹಾಲನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಭಿಯಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ಇದು ಕೆಎಂಎಫ್(KMF Milestone) ವತಿಯಿಂದ ಪ್ರತಿದಿನ 2.5 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುವುದು ಇತಿಹಾಸದಲ್ಲಿಯೇ ಬಹುದೊಡ್ಡ ಮೈಲಿಗಲ್ಲು ಎನ್ನಲಾಗಿದೆ. ಇದರಲ್ಲಿ ಒಂದು ಕೋಟಿ ಲೀಟರ್‌ ಹಾಲನ್ನು ಸ್ಥಳೀಯವಾಗಿ ಮಾರಾಟವಾಗುತ್ತಿದೆ.
ರಾಜ್ಯದಲ್ಲಿ ಶೇ.80ರಷ್ಟು ಕೆಎಂಎಫ್‌ ಬ್ರ್ಯಾಂಡ್‌ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳೇ ಮಾರಾಟವಾಗುತ್ತಿದೆ. ಇನ್ನೊಂದು ಕೋಟಿ ಲೀಟರ್‌ ಹಾಲನ್ನು ಕೆಎಂಎಫ್‌ ಉತ್ಪಾದಿಸುತ್ತದೆ. ಇನ್ನುಳಿದ 50ಸಾವಿರ ಲೀಟರ್‌ ಹಾಲನ್ನು ಖಾಸಗಿ ಡೈರಿಗಳು ಉತ್ಪಾದಿಸುತ್ತದೆ.
ಕೆಎಂಎಫ್‌ ದೇಸಿ ತಳಿಯ ಹಸುಗಳು ಮತ್ತು ಅದರ ಹಾಲನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಭಿಯಾನವನ್ನೂ ನಡೆಸಿದೆ. ಅಲ್ಲದೇ ಗುಜರಾತ್‌ನ ದೇಶಿಯ ʼಗಿರ್‌ʼ ತಳಿಯನ್ನೂ ಪೂರೈಕೆ ಮಾಡಲು ಮುಂದಾಗಿದೆ.
ಕೆಲವು ತಿಂಗಳ ಹಿಂದೆ ಕೆಎಂಎಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಸಂಭ್ರಮಾಚರಣೆಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಗೋ ಮಾತೆಗೆ ಪೂಜೆ ಸಲ್ಲಿಸಿದ್ದರು.
ಈ ಬಗ್ಗೆ ‍ಬಳ್ಳಾರಿಯ ಪಶುವೈದ್ಯರೊಬ್ಬರು ಪ್ರತಿಕ್ರಿಯಿಸಿದ್ದು, ಗುಜರಾತ್‌ನ ಗಿರ್‌ ತಳಿ ಈ ವಾತಾವರಣಕ್ಕೆ ಹೊಸತು. ಕೆಎಂಎಫ್‌ನ ಈ ಯೋಜನೆ ವಿಫಲ. ಹಸುಗಳಿಗೆ ಸ್ವತಂತ್ರ, ಉತ್ತಮ, ಶುಚಿಯಾದ ಆಹಾರದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ತಿಂಗಳದಲ್ಲಿ ದಿನವೊಂದಕ್ಕೆ 90 ಲಕ್ಷ ಲೀ. ಇತ್ತು. ಈಗ ಒಂದು ಕೋಟಿಗೆ ಹೆಚ್ಚಳವಾಗಿದೆ ಎಂದರು.
ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳು ಹೊಂದಿದ್ದು, ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ.ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ

ಧಾರವಾಡ: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಮಂದಿ ಆರೋಪಿಗಳಿಗೆ ಧಾರವಾಡ ಹೈಕೋರ್ಟ್ ಪೀಠ...

ಬಂಗಾರ ಬಣ್ಣದ ನಾಗರಹಾವು ನೋಡಿದ್ದೀರಾ?

ಅಮರಾವತಿ (ಆಂಧ್ರಪ್ರದೇಶ): ಹಾವುಗಳು ಸಹಜವಾಗಿ ಕಪ್ಪು, ಕಂದು ಬಣ್ಣದಲ್ಲಿ ಬರುತ್ತವೆ. ಮಾನವನ ಆವಾಸ್ಥ ಸ್ಥಾನದಿಂದ ದೂರದಲ್ಲಿ ಬದುಕುವ ಅವು ಆಗಾಗ್ಗೆ ಜನರ ಮಧ್ಯೆ ಗೋಚರಿಸುವುದುಂಟು....

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

ಮೈಸೂರು: ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿಲ್ಲ. ಭ್ರಷ್ಟಾಚಾರ ಆಗಿದ್ದರೆ ನಾನು ರಾಜಕೀಯ ಬಿಡುತ್ತೇನೆ. ಪ್ರಧಾನಿ ಮೋದಿ ಸುಳ್ಳು ಆರೋಪ ಮಾಡಿದ್ದಾರೆ....

ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕು

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಮುಖ್ಯವಾಗಿ ದಕ್ಷಿಣ ಒಳನಾಡಿನಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ (ನ.14)ಕ್ಕೆ ಅನ್ವಯವಾಗುವಂತೆ ಅಲ್ಲಿನ...