ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಒಂದು ಕಡೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿರುವ ಹೆಚ್ಡಿ ಕುಮಾರಸ್ವಾಮಿ ಅವ್ರು ಸುದ್ಧಿ ತಿಳಿದ ತಕ್ಷಣ ಆಸ್ಪತೆಗೆ ತೆರಳಿದರು.
ಚನ್ನಪಟ್ಟಣ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಕೇಂದ್ರ ಸಚಿವರಾಗಿರುವ ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.
ಬೆಂಗಳೂರಿನ ಕಾಸಿಗೆ ಹೋಟೆಲಲ್ಲಿ ಈ ಒಂದು ಸಭೆ ನಡೆಬೇಕಿತ್ತು ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ನಾಳೆ ಹೈಕಮಾಂಡ್ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೇನೆ ತಿಳಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now