ಇಂದು ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸಿತು.
36 ವರ್ಷಗಳ ಬಳಿಕ ಭಾರತದಲ್ಲಿ ಇದೇ ಮೊದಲ ಬಾರಿಗೆ ಗೆಲುವಿನ ಸಿಹಿ ಕಂಡಿದೆ.
1988ರಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ಗೆದ್ದಿತ್ತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಂ ಇಂಡಿಯಾ, ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ನಂತರ ಪ್ರತಿಯಾಗಿ ನ್ಯೂಜಿಲೆಂಡ್ 462 ರನ್ಗಳನ್ನು ಕಲೆಹಾಕಿ 356 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು.
ಭಾರತದ ಸರ್ಫರಾಜ್ ಖಾನ್ (150) ಮತ್ತು ರಿಷಭ್ ಪಂತ್ (99) ಬ್ಯಾಟಿಂಗ್ ನೆರವಿನಿಂದಎರಡನೇ ಇನ್ನಿಂಗ್ಸ್ನಲ್ಲಿ ಅವರ ನೆರವಿನಿಂದ 462 ರನ್ ದಾಖಲಿಸಿತು.
356 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ನ್ಯೂಜಿಲೆಂಡ್ಗೆ ಕೇವಲ 107 ರನ್‌ಗಳ ಗುರಿ ಸಾಧಿಸಿತು.
ಎರಡನೇ ಇನ್ನಿಂಗ್ಸ್ನಲ್ಲಿ ಕಿವೀಸ್ ತಂಡ ಡೆವೋನ್ ಕಾನ್ವೆ (17), ವಿಲ್ ಯಂಗ್ (37), ರಚಿನ್ ರವೀಂದ್ರ (38) ಅವರ ಬ್ಯಾಟಿಂಗ್ ನೆರವಿನಿಂದ ಭರ್ಜರಿ ಗೆಲುವು ಸಾಧಿಸಿದೆ.
ಈ ಇನ್ನಿಂಗ್ಸ್ನಲ್ಲಿ ಬುಮ್ರಾ 2 ವಿಕೆಟ್ ಪಡೆದರು. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಅ.26ರಿಂದ ಆರಂಭವಾಗಲಿದೆ.
ಈ ಪಂದ್ಯಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯ ವಹಿಸಿಕೊಂಡಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now