ನವದೆಹಲಿ: ಯುದ್ಧಭೂಮಿಯಲ್ಲಿ ಅಲ್ಲ. ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಶಕ್ತಿಗಳು ಸುಧಾರಣೆಯತ್ತ ಹೊರಳುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವದ ಜನಸಂಖ್ಯೆಯ ಆರನೇ ಒಂದು ಭಾಗದಷ್ಟು ಇರುವ 1.4 ಬಿಲಿಯನ್ ಭಾರತೀಯರ ಪರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದು ಹೇಳಿದರು.
ವಿಶ್ವ ಶಾಂತಿ ಮತ್ತು ಭದ್ರತೆಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಹೊಸ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದು ಹೇಳಿದರು. ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡುವಾಗ ಮಾನವ ಕಲ್ಯಾಣ, ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವಿಶ್ವದ ಭವಿಷ್ಯದ ಕುರಿತು ಯಾವುದೇ ಚರ್ಚೆಯಲ್ಲಿ ಮಾನವ ಕೇಂದ್ರಿತ ವಿಧಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಸೈಬರ್, ಸಮುದ್ರ ಮತ್ತು ಬಾಹ್ಯಾಕಾಶದಂತಹ ಕ್ಷೇತ್ರಗಳು ಸಂಘರ್ಷದ ಹೊಸ ರಂಗಭೂಮಿಗಳಾಗಿ ಹೊರಹೊಮ್ಮುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ನಮಗೆ ಜಾಗತಿಕ ಡಿಜಿಟಲ್ ಸಮತೋಲನ ಬೇಕು. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸೇತುವೆಯಾಗಬೇಕೇ ಹೊರತು ಜಾಗತಿಕ ಒಳಿತಿಗಾಗಿ ತಡೆಗೋಡೆಯಾಗಬಾರದು.
ಮಾನವೀಯತೆಯ ಪ್ರಯೋಜನಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.