ಬೆಳಗಾವಿ : ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನಯಾನ ಸಂಸ್ಥೆಗಳಿಗೆ ಸಂದೇಶ ಬರುತ್ತಿರುವಂತೆಯೇ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ .
ಈ ಮಧ್ಯೆ ಬಾಂಬ್ ಭೀತಿಯ ನಡುವೆ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ ನಡೆಸಲಾಗಿದೆ.
ಶನಿವಾರ ಚೆನ್ನೈನಿಂದ-ಬೆಳಗಾವಿಗೆ ಬರುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣ ಅಥಾರಿಟಿಗೆ ಇ-ಮೇಲ್ ಮೂಲಕ ಸಂದೇಶ ಬಂದಿತ್ತು.
ಈ ಬಗ್ಗೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
“ಬೆದರಿಕೆ ಕರೆಗೆ ಸಂಬಂಧಿಸಿದಂತೆ ಯಾವುದೇ ಸ್ಫೋಟಕ ವಸ್ತುಗಳು, ರಾಸಾಯನಿಕ ಪದಾರ್ಥಗಳು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವಾಗಿದ್ದು, ಇದರ ಮೂಲ ಪತ್ತೆಗೆ ಜಾಲ ಬೀಸಿದ್ದೇವೆ. ಹಾಗಾಗಿ, ಯಾರೂ ಭಯ ಪಡುವ ಅಗತ್ಯವಿಲ್ಲ” ಡಿಸಿಪಿ ರೋಹನ್ ಜಗದೀಶ್ ಎಂದು ತಿಳಿಸಿದ್ದಾರೆ.
ಹಾಗೆಯೇ ದೇಶದ ಹಲವೆಡೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.