spot_img
spot_img

ವಿಜಯೇಂದ್ರ ವಿರುದ್ಧ ಮಾಣಿಪ್ಪಾಡಿ 150 ಕೋಟಿ ರೂ. ಆಮಿಷದ ಆರೋಪ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಅನ್ವರ್ ಪಾಣಿಪ್ಪಾಡಿ ಅವರು ವಿಜಯೇಂದ್ರ ವಿರುದ್ಧ ಮಾಡಿರುವ 150 ಕೋಟಿ ರೂ. ಆಮಿಷ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.

ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿ ಅವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯ ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, “ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ, ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು.

ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ” ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

ವಕ್ಫ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ.

ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್​ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ವಕ್ಫ್​ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಸಿಎಂ ಉಲ್ಲೇಖಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಫ್​ ಆಸ್ತಿ ಕಬಳಿಕೆಯಲ್ಲಿನ ಲೂಟಿವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ.

ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

”ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ, ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು.

ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ” ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ.

ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತುಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್​​ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ.

ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ ಎಂದಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...

NAMMA METRO – ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ಜ. 15ರ ವೇಳೆಗೆ ಎರಡನೇ ರೈಲಿನ ಆಗಮನ

Bangalore Metro News: ಟಿಆರ್​ಎಸ್​ಎಸ್​ಎಲ್​ ಕಂಪನಿ ತನ್ನ ಮೊದಲ ರೈಲನ್ನ ಹಳದಿ ಮಾರ್ಗಕ್ಕೆ ಕಳುಹಿಸಿದೆ. ಇದು ಹೆಬ್ಬಗೋಡಿ ಮೆಟ್ರೋ ಡಿಪೋವನ್ನ ಜನವರಿ 15 ರ ವೇಳೆಗೆ...

COLD WEATHER – ಚಾಮುಂಡಿಬೆಟ್ಟದ ಮಂಜಿನಲೋಕದಲ್ಲಿ ಮಿಂದೇಳಲು ಇದು ಸಕಾಲ

Mysore News: ವಾಸಿಗರು ಇಲ್ಲಿಗೆ ಬರುವುದು ಸೂರ್ಯ ಉದಯಿಸಿದ ಬಳಿಕ. ಹೀಗಾಗಿ ಅವರಿಗೆ ಚಾಮುಂಡಿ ಬೆಟ್ಟದ ಈ ಸೊಬಗಿನ ಪರಿಚಯವಿಲ್ಲ. ಸ್ವತಃ ಮೈಸೂರಿನ ಅನೇಕರಿಗೇ ಇದರ...