spot_img
spot_img

terrorists on Mumbai: ಮುಂಬೈ ಮೇಲೆ ಪಾಕ್‌ ಉಗ್ರರ ದಾಳಿಗೆ 16 ವರ್ಷ : ಹುತಾತ್ಮರಿಗೆ ಗೌರವ ನಮನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮುಂಬೈ: 2008ರ ನವೆಂಬರ್ 26ರಂದು ಮುಂಬೈ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಹೋರಾಡಿ ಮಡಿದ ಹುತಾತ್ಮರಿಗೆ ಇಂದು ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣ ಮತ್ತು ಮುಖ್ಯಮಂತ್ರಿ ಏಕನಾಥ್​ ಶಿಂಥೆ ಪುಷ್ಪನಮನ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಹಿರಿಯ ಪೊಲೀಸ್​​ ಅಧಿಕಾರಿಗಳು ಹಾಗು ದಾಳಿಯಲ್ಲಿ ಮಡಿದ ಪೊಲೀಸ್​ ಸಿಬ್ಬಂದಿಗಳ ಕುಟುಂಬಸ್ಥರೂ ಕೂಡ ಹಾಜರಿದ್ದು, ಗೌರವ ಸಲ್ಲಿಸಿದರು.

2011ರ ನವೆಂಬರ್ 26 ರಂದು ಮುಂಬೈ ನಗರಿ ಮೇಲೆ ಪಾಕಿಸ್ತಾನಿ ಉಗ್ರರು ನಡೆಸಿದ ಅಮಾನವೀಯ ದಾಳಿಯಲ್ಲಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಇಂದು 16 ವರ್ಷವಾಗುತ್ತಿದ್ದು, ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು.

ಈ ದಾಳಿಗೆ ಜಾಗತಿಕವಾಗಿ ಖಂಡನೆ ವ್ಯಕ್ತವಾಗಿತ್ತು. ನಂತರದಲ್ಲಿ ಭಾರತ ತನ್ನ ಭಯೋತ್ಪಾದನಾ ನಿಗ್ರಹ ಕ್ರಮಗಳಲ್ಲಿ ಗಮನಾರ್ಹ ಬದಲಾವಣೆ ಮಾಡಿತು. 2008ರ ನವೆಂಬರ್​ 26ರಂದು ಮುಂಬೈನ ಹಲವು ಪ್ರತಿಷ್ಟಿತ ಪ್ರದೇಶಗಳಿಗೆ ನುಗ್ಗಿದ 10ಕ್ಕೂ ಹೆಚ್ಚು ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿ, 300 ಜನರು ಗಾಯಗೊಂಡಿದ್ದರು.

ಸಮುದ್ರ ಮಾರ್ಗದ ಮೂಲಕ ಮುಂಬೈ ಹೊಕ್ಕ ಲಷ್ಕರ್-​​ಎ-ತೊಯ್ಬಾ ಸಂಘಟನೆಯ ಶಸ್ತ್ರಸಜ್ಜಿತ ಉಗ್ರರು, ತಾಜ್​ ಮಹಲ್​ ಪ್ಯಾಲೇಸ್​ ಹೋಟೆಲ್​, ಒಬೆರಾಯ್​​ ಟ್ರೈಡೆಂಟ್​ ಹೋಟೆಲ್​, ಸಿಎಸ್​ಟಿ ರೈಲ್ವೆ ಸ್ಟೇಷನ್​ ಮತ್ತು ನರಿಮನ್​ ಹೌಸ್​ನಲ್ಲಿ ಗುಂಡಿನ ಮಳೆ ಹರಿಸಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಶಾಲೆಗಳ 2024-25 ನೇ ಸಾಲಿನ ‘ಶೈಕ್ಷಣಿಕ’ ಪ್ರವಾಸ ರದ್ದು

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ 2024-25 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎನ್ನಲಾದ ಸಂದೇಶದ ಕುರಿತು ಸೃಷ್ಟಿಕರಣವನ್ನು ನೀಡಲಾಗಿದೆ. ಈ...

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...