ಬೆಳಗಾವಿ : ನಗರದಲ್ಲಿ ನಡೆದಿರುವ ದಾಖಲೆಗಳಿಲ್ಲದೆ ಅಕ್ರಮವಾಗಿ ಕೋಟ್ಯಂತರ ರೂ.ಸಾಗಿಸುತ್ತಿದ್ದ ವಾಹನ ಹಾಗೂ 2.73 ಕೋಟಿ ರೂಪಾಯಿಗೂ ಅಧಿಕ ಹಣ ವಶಪಡಿಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಅ. 18 ರಂದು ಸಂಜೆ ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆಗೆ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸೂಕ್ತ ದಾಖಲೆಗಳಿಲ್ಲದೇ ಹಣವನ್ನು ಸಾಗಾಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ಪರಿಶೀಲನೆ ನಡೆಸಿದ್ದಾರೆ.
ವಾಹನವನ್ನು ವಶಕ್ಕೆ ಪಡೆದು ಪರಿಶೀಲಿಸುವಾಗ ಅದರಲ್ಲಿ 2,73,27,500 ರೂ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂ. ದುರ್ಬಳಕೆ ಆರೋಪದಡಿ ಕಾರ್ಯದರ್ಶಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಠೇವಣಿಯ 2 ಕೋಟಿ 22 ಲಕ್ಷ ರೂ. ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಸಂಘದ ಕಾರ್ಯದರ್ಶಿ ಪ್ರಕಾಶ್‌ನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಸದಸ್ಯರು ತಮ್ಮ ಠೇವಣಿ ಹಣ ಕೇಳಿದಾಗ ಕಳೆದ ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಕಳೆದ 15 ದಿನಗಳ ಹಿಂದೆ ಸಂಘದ ನಿರ್ದೇಶಕ ಉದಯ್ ಕುಮಾರ್ ದಾಖಲೆ ಸಹಿತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ ಸಂಗಮೇಶ ಮೇಟಿ, ಆರೋಪಿಯನ್ನು ಅ.14 ರ ರಾತ್ರಿ ತುಮಕೂರಿನಲ್ಲಿ ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಒಪ್ಪಿಸಬೇಕೆಂದು ಕೇಳಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಕಾರ್ಯದರ್ಶಿ ಪ್ರಕಾಶ್‌ನನ್ನು ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.