scholarship : ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಮಹದೇವಪ್ಪನವರು ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದ ಎಂದು ಸಚಿವ ಡಾ.ಮಹದೇವಪ್ಪ ಹೇಳಿದ್ದಾರೆ.
ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಸಚಿವರು ತಿಳಿಸಿದರು.
ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ ಎಂದು ತಿಳಿಸಿದ್ದಾರೆ.
ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಮಹದೇವಪ್ಪ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.