spot_img
spot_img

2011ರ ಜನಗಣತಿ: ಪರಿಶಿಷ್ಟ ಜಾತಿಯ 7.29 ಲಕ್ಷ ಜನರು ಉಪಜಾತಿಗಳನ್ನು ನಮೂದಿಸಿಲ್ಲ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆಯ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿಲ್ಲ.

2011ರ ಜನಗಣತಿಯಂತೆಯೇ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಕಾಂಗ್ರೆಸ್ ಸರಕಾರವು ಸಮರ್ಥಿಸಿಕೊಂಡಿದೆ. ಸರಕಾರಿ ಸೇವೆಗಳು ಮತ್ತು ಶಿಕ್ಷಣದಲ್ಲಿ 4 ಗುಂಪುಗಳಿಗೆ ಸೇರಿದ ವ್ಯಕ್ತಿಗಳ ಸಮರ್ಪಕ ಅಥವಾ ವಾಸ್ತವ ಪ್ರಾತಿನಿಧ್ಯದ ಬಗ್ಗೆ ಯಾವ ಅಂಕಿ ಅಂಶವೂ ಇಲ್ಲ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿದ್ದ ಟಿಪ್ಪಣಿಯಲ್ಲಿ ಈ ಅಂಶವಿದೆ. 2024ರ ಅಕ್ಟೋಬರ್ 25ರಂದು ಮಂಡಿಸಿದ್ದ ಸಚಿವ ಸಂಪುಟದ ಇಡೀ ಟಿಪ್ಪಣಿಯ ಹಾಳೆಗಳು “the-file.in” ಗೆ ಲಭ್ಯವಾಗಿದೆ.

ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಸದಾಶಿವ ಅವರ ನೇತೃತ್ವದ ಆಯೋಗವು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯು ಅಪ್ರಸ್ತುತವಾಗಿದೆ ಎಂದು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೇ ತೀರ್ಮಾನವಾಗಿತ್ತು.

ಸದಾಶಿವ ಆಯೋಗದ ವರದಿಯನ್ನಾಧರಿಸಿಯೇ ಒಳ ಮೀಸಲಾತಿ ನೀಡಬೇಕು ಎಂದು ದಲಿತ ಸಂಘಟನೆಗಳು ಹಕ್ಕೊತ್ತಾಯವನ್ನು ಮಂಡಿಸಿದ್ದವು. ಈ ಕುರಿತು ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ಕುರಿತಂತೆ ಮತ್ತೊಂದು ನ್ಯಾಯಾಂಗ ಆಯೋಗವನ್ನು ರಚಿಸಿದೆ.ಇದರ ಬೆನ್ನಲ್ಲೇ ಸಚಿವ ಸಂಪುಟಕ್ಕೆ ಮಂಡಿಸಿದ್ದ ಟಿಪ್ಪಣಿಯು ಮುನ್ನೆಲೆಗೆ ಬಂದಿದೆ

2011ರ ಜನಗಣತಿಯಂತೆ ಕರ್ನಾಟಕ ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಇದೆ. ಈ ಪೈಕಿ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿ ಇದೆ. (ಗ್ರಾಮೀಣ 75 ಲಕ್ಷ ಮತ್ತು ನಗರ 30 ಲಕ್ಷ) ರಾಜ್ಯದ ಒಟ್ಟು ಜನಸಂಖ್ಯೆಗೆ ಹೋಲಿಸಿದಾಗ ಶೇ.17.15ರಷ್ಟು ಇದೆ.

‘2011ರ ಜನಗಣತಿಯಲ್ಲಿ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿರುವುದಿಲ್ಲ.ಕಾರಣ ಒಟ್ಟಾರೆ ಜಾತಿವಾರು ನಿಖರ ಜನಸಂಖ್ಯೆ 97.56 ಲಕ್ಷ ಎಂದು ಪರಿಗಣಿಸಲಾಗಿದೆ.

ಈ ಜನಸಂಖ್ಯೆಯಲ್ಲಿ ಆದಿ ಕರ್ನಾಟಕ ಜನಸಂಖ್ಯೆ 29.21 ಲಕ್ಷ ಮತ್ತು ಆದಿ ದ್ರಾವಿಡರು 7.95 ಲಕ್ಷ ಸಂಖ್ಯೆಯಲ್ಲಿದ್ದಾರೆ’ ಎಂದು ಟಿಪ್ಪಣಿಯಲ್ಲಿ ಅಂಕಿ ಅಂಶಗಳನ್ನು ಒದಗಿಸಿರುವುದು ತಿಳಿದು ಬಂದಿದೆ.

ಮೊದಲ ಗುಂಪಿನಲ್ಲಿ (ಶೇ.6) ಆದಿದ್ರಾವಿಡ, ಭಂಬಿ, ಮಾದಿಗ, ಸಮಗಾರ ಒಟ್ಟು 4 ಜಾತಿಗಳಿವೆ. ಈ ಗುಂಪಿನ ಒಟ್ಟು ಜನಸಂಖ್ಯೆ 32.60 ಲಕ್ಷ ಇದೆ. ಎರಡನೇ ಗುಂಪಿನಲ್ಲಿ ಆದಿ ಕರ್ನಾಟಕ, ಛಲವಾದಿ, ಚನ್ನದಾಸರ, ಹೊಲೆಯ, ಮಹರ್ ಜಾತಿಗಳಿವೆ. ಈ ಗುಂಪಿನಲ್ಲಿ ಒಟ್ಟು 32.58 ಲಕ್ಷ ಜನಸಂಖ್ಯೆ ಇದೆ. ಮೂರನೇ ಗುಂಪಿನಲ್ಲಿ ಬಂಜಾರ ಹಾಗೂ ಇದರ ಸಮನಾಂತರ ಜಾತಿಗಳಿವೆ.

ಭೋವಿ ಮತ್ತು ಇದರ ಸಮನಾಂತರ ಜಾತಿಗಳು, ಕೊರಚ,/ಕೊರಚರ್ ಮತ್ತು ಕೊರಮ/ಕೊರವ,/ಕೊರವಾರ್ ಜಾತಿ ಸೇರಿ ಒಟ್ಟು 4 ಜಾತಿಗಳಿವೆ. ಈ ಗುಂಪಿನಲ್ಲಿ ಒಟ್ಟು 26.51 ಲಕ್ಷ ಜನಸಂಖ್ಯೆ ಇದೆ.

ನಾಲ್ಕನೇ ಗುಂಪಿನಲ್ಲಿ (ಮೊದಲ ಮತ್ತು ಎರಡನೇ ಗುಂಪು) ಈ ಹಿಂದೆ ಅಸ್ಪಶ್ಯತೆಗೆ ಒಳಗಾದ ಮತ್ತು ಕಡಿಮೆ ಜನಸಂಖ್ಯೆ ಇರುವ ಒಟ್ಟು 88 ಪರಿಶಿಷ್ಟ ಜಾತಿಗಳನ್ನುಸೇರಿಸಲಾಗಿದೆ. ಈ ಗುಂಪಿನಲ್ಲಿ ಒಟ್ಟು 5.87 ಲಕ್ಷ ಜನಸಂಖ್ಯೆ ಇರುವುದು ಸಚಿವ ಸಂಪುಟ ಟಿಪ್ಪಣಿ ಹಾಳೆಯಲ್ಲಿ ಗೊತ್ತಾಗಿದೆ.

2011ರ ಜನಸಂಖ್ಯೆಯ ಆಧಾರದ ಮೇಲೆ ಒಳ ಮೀಸಲಾತಿ ಮಾಡಲಾಗಿದೆ. ಆದರೆ ಸರಕಾರಿ ಸೇವೆಗಳು ಮತ್ತು ಶಿಕ್ಷಣದಲ್ಲಿ ನಾಲ್ಕು ಗುಂಪುಗಳಿಗೆ ಸೇರಿದ ವ್ಯಕ್ತಿಗಳ ಸಮರ್ಪಕ ಅಥವಾ ವಾಸ್ತವ ಪ್ರಾತಿನಿಧ್ಯದ ಬಗ್ಗೆ ಯಾವುದೇ ಅಂಕಿ ಅಂಶವೂ ಇಲ್ಲ’ ಎಂದು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಲಾಗಿದೆ.

ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಬಗ್ಗೆ ಭಾರತ ಸಂವಿಧಾನಕ್ಕೆ ಅನುಚ್ಛೇಧ 341ರಲ್ಲಿ ತಿದ್ದುಪಡಿ ಮೂಲಕ Clasue (3)ನ್ನು ಸೇರಿಸಲು ಭಾರತ ಸರಕಾರಕ್ಕೆ ಶಿಫಾರಸು ಮಾಡುವ ಸಂಬಂಧ ತೆರೆದಿರುವ ಕಡತದಲ್ಲಿ ಈ ಆದೇಶದ ಅಂಶವನ್ನು ಉಲ್ಲೇಖಿಸಿತ್ತು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...