ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 29, 2024 ರಂದು ನಡೆಸಲು ಉದ್ದೇಶಿಸಿರುವ ಕೆಎಎಸ್ – ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ ಸಂಬಂಧ, ಮಹತ್ವದ ಪ್ರಕಟಣೆ ಹೊರಡಿಸಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ ಫೆ. 26 2024 ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಸದರಿ ಕೆಎಎಸ್
ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ಈಗ ದಿನಾಂಕ ಡಿ. 29. 2024 ರಂದು ನಡೆಸಲು ನಿಗದಿಪಡಿಸಿರುತ್ತದೆ.
ಈ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ ನಲ್ಲಿ ಅಭ್ಯರ್ಥಿಗಳ ಲಾಗಿನ್ ನಿಂದ ದಿನಾಂಕ ನ. 26. 2024 ರಂದು ತಂತ್ರಾಂಶದಲ್ಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿದ್ದು, ಎಲ್ಲ ಅಭ್ಯರ್ಥಿಗಳಿಗೆ ಈಗ ಪ್ರಮುಖ ಸೂಚನೆಯನ್ನು ನೀಡಿದೆ.
ಆಯೋಗವು ದಿನಾಂಕ ಡಿ. 29. 2024 ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಇನ್ನು ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲ. ಆದ್ದರಿಂದ ತಾಂತ್ರಿಕ ದೋಷದಿಂದಾಗಿ ಪ್ರಸ್ತುತ ಡೌನ್‌ಲೋಡ್ ಮಾಡಿಕೊಂಡಿರುವ ಪ್ರವೇಶ ಪತ್ರಗಳನ್ನು ಅಸಿಂಧುಗೊಳಿಸಿದ್ದು, ಸದರಿ ಪ್ರವೇಶ ಪತ್ರವು ಮುಂದೆ ನಡೆಯುವ ಪರೀಕ್ಷೆಗೆ ಮಾನ್ಯವಲ್ಲ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಕುರಿತು ಮುಂದಿನ ದಿನಗಳಲ್ಲಿ ಪ್ರಕಟಣೆ ಜತೆಗೆ, ಅಧಿಕೃತ ಲಿಂಕ್ ಅನ್ನು ಲಭ್ಯಗೊಳಿಸಲಾಗುವುದು ಎಂದು ತಿಳಿಸಿದೆ.
ಕೆಪಿಎಸ್‌ಸಿ ಮತ್ತೆ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಿದ ನಂತರ, ಅಭ್ಯರ್ಥಿಗಳು ತಮ್ಮ ಲಾಗಿನ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಗಸ್ಟ್ 27 ರಂದು ಈ ಹಿಂದೆ ಕೆಪಿಎಸ್‌ಸಿ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಿದ್ದು, ಅಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಹಲವು ಲೋಪದೋಷಗಳಿಂದ ಕೂಡಿದ್ದ ಕಾರಣ, ಹಲವು ಅಭ್ಯರ್ಥಿಗಳು ಸಿಎಂ ಗೆ ಮರುಪರೀಕ್ಷೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಮರುಪರೀಕ್ಷೆಗೆ ಆದೇಶ ನೀಡಿದ್ದರು.
ಈ ಹಿಂದೆಯೇ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಹಲವು ದೋಷಗಳ ಕಾರಣ, ಈಗ ಡಿಸೆಂಬರ್ 29 ಕ್ಕೆ ಮರುಪರೀಕ್ಷೆಯನ್ನು ಕೆಪಿಎಸ್‌ಸಿ ನಿಗಧಿ ಮಾಡಿದೆ. ಈ ಮಧ್ಯೆಯೇ ಮರುಪರೀಕ್ಷೆ ಪ್ರಶ್ನಿಸಿ ಕೆಲವರು ಹೈಕೋರ್ಟ್‌ನ ಬೇರೆ ಬೇರೆ ನ್ಯಾಯಪೀಠಗಳಲ್ಲಿ ಸಲ್ಲಿಸಿರುವ ಅರ್ಜಿಗಳು, ಮರುಪರೀಕ್ಷೆಯ ತಡೆಯಾಜ್ಞೆ ಆದೇಶ- ಇವೆಲ್ಲವನ್ನು ತೆರೆವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಸಿದ್ಧತೆ ಮಾಡಿಕೊಂಡಿದೆ. ಡಿಸೆಂಬರ್ 09 ರಂದು ವಿಚಾರಣೆಗೆ ಬರಲಿದ್ದು, ಅಂದೇ ಈ ಕುರಿತು ಸ್ಪಷ್ಟ ಚಿತ್ರಣವು ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಂತ I – ಪೂರ್ವಭಾವಿ ಪರೀಕ್ಷೆ : 2 ಪತ್ರಿಕೆಗಳಿದ್ದು, 400 ಅಂಕಗಳಿಗೆ ಪರೀಕ್ಷೆ
ಹಂತ II – ಮುಖ್ಯ ಪರೀಕ್ಷೆ: ಕಡ್ಡಾಯ ಪತ್ರಿಕೆಗಳು 2, ಐಚ್ಛಿಕ ಪತ್ರಿಕೆಗಳು 5.
ಹಂತ III – ವ್ಯಕ್ತಿತ್ವ ಪರೀಕ್ಷೆ : 50 ಅಂಕಗಳಿಗೆ
ಈ ರೀತಿಯಾಗಿ ಕೆಪಿಎಸ್‌ಸಿ ಕೆಎಎಸ್ ಪರೀಕ್ಷೆಯಲ್ಲಿ ಪ್ರಮುಖವಾಗಿ 3 ಹಂತದ ಪರೀಕ್ಷೆಗಳು ಇರುತ್ತವೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now