spot_img
spot_img

2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ : ಸಿಎಂ ಘೋಷಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರ ಬದುಕು ಎಲ್ಲರಿಗೂ ಆದರ್ಶ. ದೇಶಕ್ಕಾಗಿ ಪ್ರಾಣ ಕೊಟ್ಟ ಅವರನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಬಡವರ ಏಳಿಗೆ ಆಗಬೇಕೆಂದರೆ ಶಿಕ್ಷಣ, ರಾಜಕೀಯ, ಆರ್ಥಿಕ ಶಕ್ತಿ, ಸಮಾನ ಅವಕಾಶಗಳನ್ನು ನೀಡಬೇಕು ಎಂದಿದ್ದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಮೂಲಕ ಬಡವರಿಗೆ ಬಾಗಿಲು ತೆಗೆಸಿದರು ಎಂದರು.

ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಅಧಿಕಾರ ವಿಕೇಂದ್ರೀಕರಣ ಮಾಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ತಂದು, ಮಹಿಳೆಯರ ಕೈಗೆ ಅಧಿಕಾರ ನೀಡಿದರು.

ಬಿಜೆಪಿಯ ರಾಜ್ಯಸಭಾ ಸದಸ್ಯ ರಾಮಾ ಜೋಯಿಸ್ ಮೀಸಲಾತಿ ವಿರುದ್ಧವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2028ರಲ್ಲಿ ಮಹಿಳಾ ಮೀಸಲಾತಿ ತರುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಿಜೆಪಿ ಅಧಿಕಾರ ಕೇಂದ್ರೀಕರಣ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದೆ. ಬಡವರು, ಸಾಮಾಜಿಕ ನ್ಯಾಯದ ವಿರೋಧಿಯಾಗಿರುವ ಬಿಜೆಪಿಯವರಿಗೆ ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ಗೌರವವಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಎಂದಿಗೂ ಅಧಿಕಾರ ವಿಕೇಂದ್ರಿಕರಣದ ಪರವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ಹೊಂದಬೇಕು ಎಂದು ಮುಖ್ಯಮಂತ್ರಿ ಹೇಳಿದರು.ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, ಇಂದಿರಾ ಗಾಂಧಿ ಅವರು ಅಂದಿನ ಕಾಲದಲ್ಲೇ ಬಲಿಷ್ಠ ಅಮೆರಿಕಕ್ಕೆ ಸೆಡ್ಡು ಹೊಡೆಯುತ್ತಿದ್ದರು. ಅವರು ಧೈರ್ಯವಂತೆ ಕರುಣಾಮಯಿ, ಮಮತಾಮಯಿ ಹಾಗೂ ತ್ಯಾಗಮಯಿ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಉಕ್ಕಿನ ಮಹಿ‍ಳೆ ಇಂದಿರಾ ಗಾಂಧಿಯವರ ನಾಯಕತ್ವ, ಗಾಂಧಿ ಕುಟುಂಬದ ತ್ಯಾಗ, ಮಾರ್ಗದರ್ಶನವನ್ನು ದೇಶದ ಜನತೆ ಮರೆಯುವುದಿಲ್ಲ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿ, ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ.

20 ಅಂಶಗಳ ಕಾರ್ಯಕ್ರಮ ಬಡವರಿಗೆ ಜಮೀನು, ಮನೆ, ಅಂಗನವಾಡಿ ಕೇಂದ್ರಗಳ ಸ್ಥಾಪನೆ, ಪಿಂಚಣಿ ಸೇರಿದಂತೆ ದೇಶದ ಅಭಿವೃದ್ಧಿಯಲ್ಲಿ ಇಂದಿರಾ ಗಾಂಧಿಯವರ ಹೆಜ್ಜೆಗಳು ಕಾಣಿಸುತ್ತವೆ. ಅದನ್ನು ಯಾವುದೇ ಸರ್ಕಾರ ಬಂದರೂ ಬದಲಿಸಲಾಗದು ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಜಾರಿಗೊಳಿಸಲಿ. ಶೇ.50ರಷ್ಟು ಮೀಸಲಾತಿ ಮಿತಿಯನ್ನು ಮೀರಿ, ಶೇ.75ರಷ್ಟು ಮೀಸಲಾತಿಯನ್ನು ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ದುಡಿದ ಐವರು ಮಹಿಳಾ ಮುಖಂಡರಿಗೆ ಇಂದಿರಾ ಗಾಂಧಿ ವಿಶಿಷ್ಟ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಚಿವ ಕೆ.ಎಚ್ ಮುನಿಯಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವೆ ರಾಣಿ ಸತೀಶ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...