spot_img
spot_img

ಇಸ್ರೇಲ್, ಹಿಜ್ಬುಲ್ಲಾ ಮಧ್ಯೆ 60 ದಿನಗಳ ಕದನ ವಿರಾಮ ಜಾರಿ

spot_img
spot_img

Share post:

ವಾಶಿಂಗ್ಟನ್: ಇಸ್ರೇಲ್ ಮತ್ತು ಹಿಜ್ಬುಲ್ಲಾ ಮಧ್ಯೆ ಕದನ ವಿರಾಮ ಜಾರಿಯಾಗಿದೆ. ಬುಧವಾರದಿಂದ ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಯಾಗಲಿದೆ ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಘೋಷಿಸಿದ್ದಾರೆ.

ಅಮೆರಿಕ ಮಧ್ಯಸ್ಥಿಕೆಯಲ್ಲಿ ಲೆಬನಾನ್​​ನ ಹಿಜ್ಬುಲ್ಲಾ ಜೊತೆಗೆ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಒಪ್ಪಿಕೊಂಡಿದ್ದು, ಇದು ಬುಧವಾರ ಮುಂಜಾನೆಯಿಂದ (ಇಸ್ರೇಲ್ ಸಮಯ) ಜಾರಿಗೆ ಬಂದಿದೆ. ಹಿಜ್ಬುಲ್ಲಾ ನಾಯಕರು ಒಪ್ಪಂದಕ್ಕೆ ಪ್ರಾಥಮಿಕ ಬೆಂಬಲವನ್ನು ಸೂಚಿಸಿದ್ದಾರೆ. ಈ ಮೂಲಕ ಎರಡೂ ಪಕ್ಷಗಳು ಈಗ ಯುದ್ಧದಿಂದ ಹಿಂದೆ ಸರಿಯುವ ನಿರ್ಣಾಯಕ ಹಂತಕ್ಕೆ ತಲುಪಿವೆ.

ಈ ಒಪ್ಪಂದದ ಪ್ರಕಾರ, 60 ದಿನಗಳ ಕಾಲ ಕದನ ವಿರಾಮ ಜಾರಿಯಲ್ಲಿ ಇರಲಿದೆ. ಇಸ್ರೇಲಿ ಪಡೆಗಳು ಲೆಬನಾನ್​ನಿಂದ ಹಿಂದೆ ಸರಿಯಬೇಕು ಮತ್ತು ಹಿಜ್ಬುಲ್ಲಾ ದಕ್ಷಿಣ ಲೆಬನಾನ್ ನಿಂದ ಹಿಂದೆ ಸರಿಯಬೇಕೆಂಬ ಷರತ್ತು ವಿಧಿಸಲಾಗಿದೆ.

ಏತನ್ಮಧ್ಯೆ, ಹಿಜ್ಬುಲ್ಲಾ ಒಪ್ಪಂದವನ್ನು ಉಲ್ಲಂಘಿಸಿದರೆ ಅದರ ವಿರುದ್ಧ ಮತ್ತೆ ಕ್ರಮ ಕೈಗೊಳ್ಳುವ ಹಕ್ಕು ತನಗಿರಬೇಕೆಂದು ಇಸ್ರೇಲ್ ಒತ್ತಾಯಿಸಿದೆ. ಆದರೆ ಲೆಬನಾನ್ ಈ ನಿಬಂಧನೆಯನ್ನು ವಿರೋಧಿಸಿದೆ.

ಪ್ರಮುಖ ಷರತ್ತುಗಳು :
ಈ ಒಪ್ಪಂದದ ಪ್ರಕಾರ 60 ದಿನಗಳ ಕಾಲ ಕದನ ವಿರಾಮ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಇಸ್ರೇಲಿ ಪಡೆಗಳು ಗಡಿಯ ತಮ್ಮ ಭಾಗಕ್ಕೆ ಹಿಂತಿರುಗುತ್ತವೆ ಮತ್ತು ಹಿಜ್ಬುಲ್ಲಾ ದಕ್ಷಿಣ ಲೆಬನಾನ್​​ನ ಹೆಚ್ಚಿನ ಭಾಗಗಳಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂಪಡೆಯಲಿದೆ.

ಈ ಒಪ್ಪಂದವು ಬುಧವಾರದಿಂದ (ಸ್ಥಳೀಯ ಸಮಯ) ಜಾರಿಗೆ ಬಂದಿದೆ.

ಲಿಟಾನಿ ನದಿಯ ದಕ್ಷಿಣದ ಪ್ರದೇಶದಲ್ಲಿ ಸಾವಿರಾರು ಲೆಬನಾನ್ ಸೈನಿಕರು ಮತ್ತು ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳನ್ನು ನಿಯೋಜಿಸಲು ಒಪ್ಪಿಕೊಳ್ಳಲಾಗಿದೆ.

ಯುಎಸ್ ನೇತೃತ್ವದ ಅಂತರರಾಷ್ಟ್ರೀಯ ಮೇಲ್ವಿಚಾರಣಾ ಗುಂಪು ಎಲ್ಲಾ ಪಕ್ಷಗಳು ಕದನವಿರಾಮ ಪಾಲಿಸುವ ಬಗ್ಗೆ ಮೇಲ್ವಿಚಾರಣೆ ಮಾಡಲಿದೆ. ಈ ಒಪ್ಪಂದವು ಹಗೆತನಕ್ಕೆ ಶಾಶ್ವತ ಅಂತ್ಯವನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಅಧ್ಯಕ್ಷ ಬೈಡನ್ ಹೇಳಿದ್ದಾರೆ.

ಹಿಜ್ಬುಲ್ಲಾ ತನ್ನ ಬದ್ಧತೆಗಳನ್ನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳುವ ಹಕ್ಕು ತನಗಿರಬೇಕೆಂದು ಇಸ್ರೇಲ್ ಒತ್ತಾಯಿಸಿದೆ. ಈ ನಿಬಂಧನೆಯನ್ನು ಲೆಬನಾನ್ ಅಧಿಕಾರಿಗಳು ಒಪ್ಪಂದದಲ್ಲಿ ಸೇರಿದಂತೆ ವಿರೋಧಿಸಿದ್ದಾರೆ.
ಇಸ್ರೇಲ್ ತನ್ನ ದಾಳಿಯನ್ನು ಪುನರಾರಂಭಿಸುವುದಿಲ್ಲ ಎಂಬ ಭರವಸೆಯ ಮೇಲೆ ಈ ಒಪ್ಪಂದಕ್ಕೆ ತಾವು ಒಪ್ಪಿರುವುದಾಗಿ ಹಿಜ್ಬುಲ್ಲಾ ನಾಯಕರೊಬ್ಬರು ಹೇಳಿದ್ದಾರೆ.

“ಶತ್ರು ಸರ್ಕಾರ ಸಹಿ ಮಾಡಿದ ಒಪ್ಪಂದವನ್ನು ಪರಿಶೀಲಿಸಿದ ನಂತರ, ನಾವು ಹೇಳಿದ್ದಕ್ಕೂ ಲೆಬನಾನ್ ಅಧಿಕಾರಿಗಳು ಒಪ್ಪಿಕೊಂಡಿದ್ದಕ್ಕೂ ಹೋಲಿಕೆ ಇದೆಯೇ ಎಂದು ನಾವು ನೋಡುತ್ತೇವೆ” ಎಂದು ಹಿಜ್ಬುಲ್ಲಾದ ರಾಜಕೀಯ ಮಂಡಳಿಯ ಉಪಾಧ್ಯಕ್ಷ ಮಹಮೂದ್ ಖಮಾಟಿ ಅಲ್ ಜಜೀರಾಗೆ ತಿಳಿಸಿದರು.

ನಾವು ಆಕ್ರಮಣವನ್ನು ಕೊನೆಗೊಳಿಸಲು ಬಯಸುತ್ತೇವೆ, ಆದರೆ ಲೆಬನಾನ್ ದೇಶದ ಸಾರ್ವಭೌಮತ್ವವನ್ನು ಬಲಿಕೊಡಲಾಗದು ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಮಂಗಳವಾರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಲೆಬನಾನ್​ನ ಹಿಜ್ಬುಲ್ಲಾದೊಂದಿಗೆ ಯುಎಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರಲು ತಮ್ಮ ಕ್ಯಾಬಿನೆಟ್ ಗೆ ಶಿಫಾರಸು ಮಾಡುವುದಾಗಿ ಹೇಳಿದರು.

ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘರ್ಷದಿಂದ 1.2 ಮಿಲಿಯನ್ ಲೆಬನಾನ್ ಜನತೆ ಮತ್ತು 50,000 ಇಸ್ರೇಲಿಗಳು ಸ್ಥಳಾಂತರಗೊಂಡಿದ್ದಾರೆ. ಇಸ್ರೇಲ್​​ನ ಭಾರಿ ಬಾಂಬ್ ದಾಳಿಯಿಂದ ಲೆಬನಾನ್​ನಲ್ಲಿ 3,700 ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಇದರಲ್ಲಿ ಹೆಚ್ಚಿನವರು ನಾಗರಿಕರು ಎಂದು ಲೆಬನಾನ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಸ್ರೇಲ್ ಕಡೆಗೆ 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಗಾಜಾದಲ್ಲಿನ ಮಾರಣಾಂತಿಕ ಸಂಘರ್ಷವನ್ನು ಕೊನೆಗೊಳಿಸುವ ಬಗ್ಗೆ ಈ ಒಪ್ಪಂದದಲ್ಲಿ ಏನನ್ನೂ ಹೇಳಲಾಗಿಲ್ಲ. 2023ರ ಅಕ್ಟೋಬರ್ ನಲ್ಲಿ ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಬಲಿತೆಗೆದುಕೊಂಡ ನಂತರ ಪ್ರಾರಂಭವಾದ ಗಾಜಾ ಯುದ್ಧ ಈಗಲೂ ಮುಂದುವರೆದಿದೆ.

ಗಾಜಾದಲ್ಲಿ ಇಸ್ರೇಲ್ ತನ್ನ ಮಿಲಿಟರಿ ಕ್ರಮಗಳನ್ನು ನಿಲ್ಲಿಸಿದರೆ ಮಾತ್ರ ಇಸ್ರೇಲ್ ಮೇಲಿನ ದಾಳಿಯನ್ನು ನಿಲ್ಲಿಸುವುದಾಗಿ ಹಿಜ್ಬುಲ್ಲಾ ಈ ಹಿಂದೆ ಸಮರ್ಥಿಸಿಕೊಂಡಿದೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...