spot_img
spot_img

ಬುಡಕಟ್ಟು ಜನರಿಗಾಗಿ ಪ್ರಧಾನಿಯಿಂದ 6 ಸಾವಿರ ಕೋಟಿ ರೂ.ಗಳ ಕಾರ್ಯಕ್ರಮ ಘೋಷಣೆ: ಸಚಿವ ಹೆಚ್​ಡಿಕೆ

spot_img
spot_img

Share post:

ಮೈಸೂರು: ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಸುಮಾರು ₹6,650 ಕೋಟಿ ಮೊತ್ತದ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಘೋಷಣೆ ಮಾಡಿದ್ದಾರೆ ಎಂದು ಹೆಚ್​ಡಿಕೆ ತಿಳಿಸಿದ್ದಾರೆ.

“ಬುಡಕಟ್ಟು ಜನರ ಕಲ್ಯಾಣ, ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರಕಾರ ಕಟಿಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ದಿನ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಸುಮಾರು ₹6,650 ಕೋಟಿ ಮೊತ್ತದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ಗೌರವ ದಿನದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಜಮುಯಿ​ನಿಂದ ಮಾತನಾಡಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೈಸೂರಿನಿಂದ ಪಾಲ್ಗೊಂಡಿದ್ದರು.

“ಶಿಕ್ಷಣ, ವಸತಿ, ಆರೋಗ್ಯ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಿ ಬುಡಕಟ್ಟು ಸಮುದಾಯಗಳ ಹಾಡಿಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಪ್ರಧಾನಿಗಳು ಇಷ್ಟು ಬೃಹತ್ ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳನ್ನು ಬುಡಕಟ್ಟು ಜನರು ಅತ್ಯಂತ ಉತ್ತಮವಾಗಿ ಬಳಕೆ ಮಾಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದರು.

“ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರಬೇಕು ಎನ್ನುವ ಮಹಾ ಸಂಕಲ್ಪದೊಂದಿಗೆ ಪ್ರಧಾನಿಗಳು ಕೆಲಸ ಮಾಡುತ್ತಿದ್ದಾರೆ. ಕೇವಲ ನೂರೇ ಜನರು ವಾಸವಿದ್ದರೂ ಅಂಥ ಹಾಡಿಗಳಿಗೆ ನೇರ ರಸ್ತೆ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದೆ. ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ, ಟೆಲಿಕಾಂ ಸಂಪರ್ಕ, ಮಕ್ಕಳು ಮಹಿಳೆಯರಿಗೆ ಪೌಷ್ಟಿಕ ಆಹಾರ ಪೂರೈಕೆ, ಮೊಬೈಲ್ ಮೆಡಿಕಲ್ ಸೆಂಟರ್​ಗಳು, ಅಂಗನವಾಡಿ ಕೇಂದ್ರಗಳ ಸ್ಥಾಪನೆ ಹಾಗೂ ಏಕಲವ್ಯ ಮಾದರಿ ಶಾಲೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸ್ಥಾಪನೆ ಮಾಡಿ ಬುಡಕಟ್ಟು ಜನರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಇದನ್ನು ಮೋದಿ ಅವರು ಇನ್ನೂ ದೊಡ್ಡ ಪ್ರಮಾಣದಲ್ಲಿ ಮುಂದುವರಿಸಿಕೊಂಡು ಹೋಗಲು ನಿರ್ಧರಿಸಿದ್ದಾರೆ” ಎಂದು ಕುಮಾರಸ್ವಾಮಿ ಅವರು ಹೇಳಿದರು.

“ಅರಣ್ಯದಲ್ಲಿ ಅಥವಾ ಅರಣ್ಯದ ಅಂಚಿನಲ್ಲಿ ವಾಸ ಮಾಡುವ ಬುಡಕಟ್ಟು ಜನರಿಗೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಹಾಗೂ ಆ ಬಗ್ಗೆ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅವರು ವಾಸ ಮಾಡುವ ಹಾಡಿಗಳಿಗೆ ಭೇಟಿ ಕೊಡಬೇಕು. ಕೊನೆಯ ಪಕ್ಷ ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೆ ಒಮ್ಮೆ ಭೇಟಿ ಕೊಟ್ಟರೆ ಅವರಿಗೆ ಹೆಚ್ಚು ಅನುಕೂಲ ಆಗುತ್ತದೆ” ಎಂದು ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಅಲ್ಲದೇ “ಜನರ ಜತೆ ಬೆರೆಯಬೇಕು.

ಮೋದಿ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಅವರಿಗೆ ಮುಟ್ಟಿಸಬೇಕು” ಎಂದು ಅವರು ಹೇಳಿದರು.
“ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಬುಡಕಟ್ಟು ಸಮುದಾಯಗಳ ಹಾಡಿಗಳಿಗೆ ಭೇಟಿ ನೀಡಿದ್ದೆ. ಅವರ ಮನೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಅವರ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಈ ಅನುಭವದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಈ ಮಾತು ಹೇಳುತ್ತಿದ್ದೇನೆ” ಎಂದು ಅವರು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಾಸಕ ಶ್ರೀವತ್ಸ, ವಿಧಾನ ಪರಿಷತ್​ ಸದಸ್ಯ ಸಿ.ಎನ್. ಮಂಜೇಗೌಡ ಹಾಗೂ ಕೇಂದ್ರ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...