spot_img
spot_img

9 KILLED IN PAKISTAN:ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Balochistan, Pakistan News:

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುವಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿಯ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿರುವ ಸಾಧ್ಯತೆಗಳಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತರಾದ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದ ಬಾಂಬ್​ ಸ್ಫೋಟಿಸಿ 9 ಕಾರ್ಮಿಕರು ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ PAKISTANದ ಬಲೂಚಿಸ್ತಾನ್​ ಪ್ರಾಂತ್ಯದಲ್ಲಿ ವರದಿಯಾಗಿದೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಏಳು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತಿಲ್ಲ. ಆದರೆ, ಬಲೂಚ್ ಲಿಬರೇಶನ್ ಆರ್ಮಿ ಇದೇ ರೀತಿ ಈ ಹಿಂದೆ ನಡೆದ ಕಾನೂನುಬಾಹಿರ ಕೃತ್ಯಗಳನ್ನು ಎಸೆಗಿದೆ ಎಂದು ಆರೋಪಿಸಲಾಗಿತ್ತು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆಯಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿವೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಗಣಿ ಕೆಲಸಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಈ ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಆರೋಪಿಸಲಾಗುತ್ತಿದೆ. ಮತ್ತೆ ಕೆಲವರು ಶಂಕಿಸದಂತೆ ಈ ಕೆಲಸಗಾರರು ಬಲೂಚಿಸ್ತಾನ ಮೂಲದವರಲ್ಲದ ಕಾರಣ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.ಗಣಿ ಇಲಾಖೆ ಪ್ರಕಾರ, ಸಾವನ್ನಪ್ಪಿದವರೆಲ್ಲ ಖೈಬರ್​ ಪಖ್ತುಂಖ್ವಾದ ಸ್ವತ್​ ಮತ್ತು ಶಂಗಲ ಮೂಲದವರಾಗಿದ್ದಾರೆ.

 

ಇದನ್ನು ಓದಿರಿ :260 foreigners rescued from virtual slavery in Myanmar

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...