spot_img
spot_img

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

spot_img
spot_img

Share post:

New Delhi News:

ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.

ಚುನಾವಣಾ ELECTORAL BOND CASE​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ.

ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್​, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್​ಐಆರ್​ ದಾಖಲಿಸಬಾರದು ಎಂದು ಪೀಠ ಆದೇಶಿಸಿತು. ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ.

ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು. ELECTORAL BOND CASE ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್​ನ ಆದರ್ಶ್ ಆರ್.ಅಯ್ಯರ್ ಅವರು ದೂರು ನೀಡಿದ್ದರು.ಈ ಪ್ರಕರಣ ರದ್ದುಪಡಿಸುವಂತೆ ಕೋರಿ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚಿಗೆ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಸೆಪ್ಟೆಂಬರ್ 30 ರಂದು ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್​ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹಾಗಾಗಿ, ನಳಿನ್ ಕುಮಾರ್ ಕಟೀಲ್ ಇನ್ನಿತರಿಗೆ ಬಿಗ್ ರಿಲೀಫ್ ನೀಡಲಾಗಿತ್ತು. ELECTORAL BOND CASEದಲ್ಲಿ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ELECTORAL BOND CASE ಮೂಲಕ ಕೋಟ್ಯಂತರ ರೂ ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ವಿರುದ್ಧ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ಇದನ್ನು ಓದಿರಿ : US Begins Deportation Of Illegal Indian Migrants Amid Stricter Immigration Laws

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...