spot_img
spot_img

PM MODI SPEECH : ‘ಅಂಬೇಡ್ಕರ್ ಬಗ್ಗೆ ದ್ವೇಷ ಹೊಂದಿದ್ದ ಕಾಂಗ್ರೆಸ್ ಚುನಾವಣೆಯಲ್ಲಿ ಅವರನ್ನು ಸೋಲಿಸಿತ್ತು’

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

PM MODI SPEECH ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಅಂಬೇಡ್ಕರ್ ಅವರ ಬಗ್ಗೆ ಕಾಂಗ್ರೆಸ್ ದ್ವೇಷದ ಭಾವನೆ ಹೊಂದಿದ್ದರಿಂದಲೇ ಅದು ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಿತ್ತು ಎಂದರು.

PM MODI SPEECH ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ದ್ವೇಷ ಮತ್ತು ಕೋಪದ ಭಾವನೆಯನ್ನು ಹೊಂದಿದ್ದು, ಅನಿವಾರ್ಯವಾಗಿ ಅದು ಜೈ ಭೀಮ್ ಮಂತ್ರವನ್ನು ಜಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಚುನಾಯಿತ ಸರ್ಕಾರಗಳನ್ನು ಕಾಂಗ್ರೆಸ್ ಅಸ್ಥಿರಗೊಳಿಸುತ್ತಿತ್ತು, ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುವ ಬದಲು ಇತರರ ಪ್ರಗತಿಗೆ ಅಡ್ಡಿಪಡಿಸುವಲ್ಲಿ ಅದು ನಿರತವಾಗಿದೆ ಎಂದು ಪ್ರಧಾನಿ ಆರೋಪಿಸಿದರು.

PM MODI SPEECH “ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕಾಂಗ್ರೆಸ್ ಎಷ್ಟು ಕೋಪ ಮತ್ತು ದ್ವೇಷದ ಭಾವನೆಯನ್ನು ಹೊಂದಿತ್ತು ಎಂಬುದನ್ನು ಚೆನ್ನಾಗಿ ದಾಖಲಿಸಲಾಗಿದೆ. ಅಂಬೇಡ್ಕರ್ ಅವರ ಮಾತುಗಳಿಂದ ಕಾಂಗ್ರೆಸ್​ಗೆ ಕಿರಿಕಿರಿಯಾಗುತ್ತಿತ್ತು. ಈ ಕೋಪದಿಂದಾಗಿ, ಅವರು ಬಾಬಾ ಸಾಹೇಬ್ ಅವರನ್ನು ಎರಡು ಚುನಾವಣೆಗಳಲ್ಲಿ (1952, 1954) ಸೋಲಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಿದರು. ಬಾಬಾ ಸಾಹೇಬ್ ಅವರನ್ನು ಭಾರತ ರತ್ನಕ್ಕೆ ಅರ್ಹರೆಂದು ಕಾಂಗ್ರೆಸ್ ಪರಿಗಣಿಸಲಿಲ್ಲ. ಇಂದು ಅನಿವಾರ್ಯವಾಗಿ ಅವರು ‘ಜೈ ಭೀಮ್’ ಘೋಷಣೆ ಕೂಗುತ್ತಿದ್ದಾರೆ. ಬಣ್ಣಗಳನ್ನು ಬದಲಾಯಿಸುವಲ್ಲಿ ಕಾಂಗ್ರೆಸ್ ನಿಪುಣವಾಗಿದೆ.” ಎಂದು PM MODI SPEECH ಹೇಳಿದರು.

“ಇಂದು, ಸಮಾಜದಲ್ಲಿ ಜಾತಿ ವಿಷವನ್ನು ಹರಡುವ ಪ್ರಯತ್ನಗಳು ನಡೆಯುತ್ತಿವೆ… ಹಲವು ವರ್ಷಗಳಿಂದ, ಎಲ್ಲಾ ಪಕ್ಷಗಳ ಒಬಿಸಿ ಸಂಸದರು ಒಬಿಸಿ ಸಮಿತಿಗೆ ಸಾಂವಿಧಾನಿಕ ಸ್ಥಾನಮಾನವನ್ನು ಒತ್ತಾಯಿಸುತ್ತಿದ್ದರು. ಆದರೆ ಅವರ ಬೇಡಿಕೆಯನ್ನು ತಿರಸ್ಕರಿಸಲಾಯಿತು. ಏಕೆಂದರೆ ಅದು ಕಾಂಗ್ರೆಸ್​ನ ರಾಜಕೀಯಕ್ಕೆ ಸರಿಹೊಂದುವುದಿಲ್ಲ. ಆದರೆ ನಾವು ಈ ಸಮಿತಿಗೆ ಸಾಂವಿಧಾನಿಕ ಸ್ಥಾನಮಾನ ನೀಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದರು.

ನಂತರ ಸದನವು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯವನ್ನು ಅಂಗೀಕರಿಸಿತು. “ಕಾಂಗ್ರೆಸ್ ಸರ್ಕಾರಗಳನ್ನು ಅಸ್ಥಿರಗೊಳಿಸಿತು. ‘ದುಸ್ರೆ ಕಿ ಲಕೀರ್ ಛೋಟಿ ಕರೋ (ಬೇರೆಯವನ್ನು ನಾಶಪಡಿಸುವುದು)’ ಎಂಬುದೇ ಅವರ ಧ್ಯೇಯವಾಕ್ಯವಾಗಿದೆ. ಸ್ವಾತಂತ್ರ್ಯ ಹೋರಾಟದೊಂದಿಗೆ ಸಂಪರ್ಕ ಹೊಂದಿರುವ ದೇಶದ ಹಳೆಯ ಪಕ್ಷಕ್ಕೆ ಇಂಥ ದುಃಸ್ಥಿತಿಯೇ? ಅವರು ತಮ್ಮ ಬಗ್ಗೆ ಯೋಚಿಸಿದ್ದರೆ, ಸಂಸತ್ತಿನಲ್ಲಿ ಆಡಳಿತ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಅವರಿಗೆ ಅವಕಾಶ ಸಿಗುತ್ತಿತ್ತು” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನು ಓದಿರಿ : SL vs AUS 2nd Test: Steve Smith Surpasses Ricky Ponting To Etch His Name In Record Books

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...