spot_img
spot_img

IND VS ENG ODI SERIES : ಭಾರತಕ್ಕೆ ಡೇಂಜರಸ್ ಆಟಗಾರನ ಎಂಟ್ರಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

IND vs ENG, 2nd ODI:

IND VS ENG ODI SERIES ಇಂಗ್ಲೆಂಡ್​ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಸ್ಟಾರ್​ ಪ್ಲೇಯರ್​ ಕಮ್​ಬ್ಯಾಕ್​ ಮಾಡಲಿದ್ದಾರೆ. ಎರಡನೇ ಪಂದ್ಯದಲ್ಲೂ ಇದೆ ಆಟವನ್ನು ಮುಂದುವರೆಸಿ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಸಂಕಲ್ಪ ತೊಟ್ಟಿದೆ.

ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಆದ ತಪ್ಪುಗಳನ್ನು ತಿದ್ದಿಕೊಂಡು ಎರಡನೇ ಮ್ಯಾಚ್​ನಲ್ಲಿ ಗೆಲುವು ಸಾಧಿಸಲು ಆಂಗ್ಲ ಪಡೆ ಸಿದ್ಧತೆ ನಡೆಸುತ್ತಿದೆ. ಚಾಂಪಿಯನ್ಸ್​ ಟ್ರೋಫಿಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್​ ತಂಡಗಳು 3 ಪಂದ್ಯಗಳ ಏಕದಿನ ಸರಣಿ ಆಡುತ್ತಿವೆ.

ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿರುವ ಭಾರತ 4 ವಿಕೆಟ್​ಗಳಿಂದ ಆಂಗ್ಲರನ್ನು ಬಗ್ಗು ಬಡೆದಿದೆ. ಇದರೊಂದಿಗೆ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

Coke for Jaiswal or Iyer:

ಉಭಯ ತಂಡಗಳ ನಡುವಿನ ಈ ಪಂದ್ಯ ಕಟಕ್​ನ ಬಾರಾಬತಿ ಮೈದಾನದಲ್ಲಿ ನಡೆಯಲಿದೆ. ಆದರೆ ಎರಡನೇ ಪಂದ್ಯದಲ್ಲಿ ಕೆಲ ಬದಲಾವಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

IND VS ENG ODI SERIES ಮೊದಲ ಪಂದ್ಯವನ್ನು ಆಡಿರುವ ಯಶಸ್ವಿ ಜೈಸ್ವಾಲ್​ ಅಥವಾ ಶ್ರೇಯಸ್​ ಅಯ್ಯರ್​ ಇಬರಲ್ಲಿ ಒಬ್ಬರಿಗೆ ಕೋಕ್​ ನೀಡುವ ಸಾಧ್ಯತೆ ಇದೆ. ಏಕೆಂದರೆ ಗಾಯದಿಂದಾಗಿ ಮೊದಲ ಪಂದ್ಯ ತಪ್ಪಿಸಿಕೊಂಡಿದ್ದ ವಿರಾಟ್​ ಕೊಹ್ಲಿ ಎರಡನೇ ಪಂದ್ಯ ಆಡಲು ಸಜ್ಜಾಗಿದ್ದಾರೆ.

Kohli comeback after 5 months:

ಭಾರತದ ಸ್ಟಾರ್​ ಬ್ಯಾಟರ್​ ಆಗಿರುವ ವಿರಾಟ್​ ಕೊಹ್ಲಿ 5 ತಿಂಗಳ ಬಳಿಕ ಏಕದಿನ ಪಂದ್ಯಕ್ಕೆ ಮರಳಲಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಇದರ ಬಳಿಕ ಭಾರತ ಏಕದಿನ ಪಂದ್ಯಗಳನ್ನು ಆಡಿರಲಿಲ್ಲ.

Virat on the brink of a world record:

ಇದಕ್ಕೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಮತ್ತು ಶ್ರೀಲಂಕಾದ ಸಂಗಕ್ಕಾರ ಈ ಸಾಧನೆ ಮಾಡಿದ್ದಾರೆ. ತೆಂಡೂಲ್ಕರ್​ ಈ 350 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರೇ, ಸಂಗಕ್ಕಾರ 378 ಇನ್ನಿಂಗ್ಸ್​ ತೆಗದುಕೊಂಡಿದ್ದಾರೆ. ಆದರೆ ಕೊಹ್ಲಿ 283 ಇನ್ನಿಂಗ್ಸ್​ಗಳಲ್ಲೆ 13,906 ರನ್​ ಕಲೆಹಾಕಿದ್ದಾರೆ.

ಇಂಗ್ಲೆಂಡ್​ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೂ 94ರನ್​ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14000 ರನ್​ ಪೂರ್ಣಗೊಳಿಸಲಿದ್ದಾರೆ. ಇದರೊಂದಿಗೆ ಕಡಿಮೆ ಇನ್ನಿಂಗ್ಸ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್​​ ಎನಿಸಿಕೊಳ್ಳಲಿದ್ದಾರೆ. ಒಟ್ಟಾರೆ ಮೂರನೇ ಬ್ಯಾಟರ್​ ಆಗಲಿದ್ದಾರೆ.

Potential team:

ರೋಹಿತ್​ ಶರ್ಮಾ (ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಕೆಎಲ್​ ರಾಹುಲ್ (ವಿಕೆಟ್​ ಕೀಪರ್​)​, ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​​ ಪಟೆಲ್​, ಮೊಹಮ್ಮದ್​ ಶಮಿ, ಹರ್ಷಿತ್​ ರಾಣಾ/ಅರ್ಷದೀಪ್​ ಸಿಂಗ್​, ಕುಲ್ದೀಪ್​ ಯಾದವ್​/ ವರುಣ್​​ಚಕ್ರವರ್ತಿ. ​

ಇದನ್ನು ಓದಿರಿ : US Judge Temporarily Blocks Trump From Placing Thousands Of USAID Workers On Paid Leave

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...