Prayag Raj News:
ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಹಾಕುಂಭಮೇಳ ಭಕ್ತರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ದಿನ ಕಳೆದಂತೆ ಭಕ್ತ ಸಾಗರ ತ್ರಿವೇಣಿ ಸಂಗಮದಲ್ಲಿ ಮಿಂದು ಪುನೀತರಾಗುತ್ತಿದ್ದಾರೆ. ಡಿಸಿಎಂ DK SHIVAKUMAR ಅವರು ಇಂದು ಕುಟುಂಬ ಸಮೇತ ಉತ್ತರ ಪ್ರದೇಶದ ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದಾರೆ.ಈ ಬಾರಿಯ ಮಹಾಕುಂಭಮೇಳ 3 ಅಮೃತ ಸ್ನಾನಕ್ಕೆ ಸಾಕ್ಷಿಯಾಗಿದೆ.
ಜನವರಿ 14ರ ಮಕರ ಸಂಕ್ರಾಂತಿ, ಜನವರಿ 29ರ ಮೌನಿ ಅಮಾವಾಸ್ಯೆ ಹಾಗೂ ಫೆಬ್ರವರಿ 3ರ ವಸಂತ್ ಪಂಚಮಿಯಂದು ಕೋಟ್ಯಾಂತರ ಭಕ್ತರು ಅಮೃತ ಸ್ನಾನದಲ್ಲಿ ಮಿಂದೆದ್ದಿದ್ದಾರೆ. ಮಹಾ ಕುಂಭಮೇಳದಲ್ಲಿ ಸಂಚರಿಸಿದ DK SHIVAKUMAR ಅವರು ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ ಮಾಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ DK SHIVAKUMAR ಅವರು 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದಿದ್ದಾರೆ. ಹರ ಹರ ಮಹಾದೇವ ಎನ್ನುತ್ತಾ ತ್ರಿವೇಣಿ ಸಂಗಮದಲ್ಲಿ ಮುಳುಗಿದ ಡಿ.ಕೆ ಶಿವಕುಮಾರ್ ಅವರಿಗೆ ಸಾಧು, ಸಂತರು ಆಶೀರ್ವಾದ ಮಾಡಿದ್ದಾರೆ.
ಈ ಬಾರಿಯ ಮಹಾಕುಂಭ ಮೇಳ ಕಾಂಗ್ರೆಸ್, ಬಿಜೆಪಿ ನಾಯಕರ ವಾಕ್ಸಮರಕ್ಕೂ ಸಾಕ್ಷಿಯಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾ ಸ್ನಾನದಿಂದ ಬಡತನ ನಿರ್ಮೂಲನೆ ಸಾಧ್ಯವೇ ಎಂದು ಪ್ರಶ್ನಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ತಮ್ಮ ಭಕ್ತಿ, ಭಾವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆ ರಾಷ್ಟ್ರಾದ್ಯಂತ ಚರ್ಚೆಯಾಗಿದ್ದು, ಬಿಜೆಪಿಗರು ಕೆಂಡಕಾರಿದ್ದರು. ಕುಂಭಮೇಳದ ವಿಚಾರ ಕಾಂಗ್ರೆಸ್, ಬಿಜೆಪಿ ನಾಯಕರು ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದಾರೆ.
ಇದನ್ನು ಓದಿರಿ : How to manage to stay hydrated in winter without drinking water all day.