spot_img
spot_img

IND VS ENG 2ND ODI:ಸಚಿನ್ಗೂ ಸಾಧ್ಯವಾಗದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!

spot_img
spot_img

Share post:

Ind Was Inga 2nd Read News:

ENG ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ದೊಡ್ಡ ದಾಖಲೆ ಬರೆಯಲು ಸಜ್ಜಾಗಿದ್ದಾರೆ.ಈ ಪಂದ್ಯದಲ್ಲಿ ಟಾಸ್​​ ಗೆದ್ದಿರುವ ENG ಮೊದಲು ಬ್ಯಾಟಿಂಗ್​ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಏತನ್ಮಧ್ಯೆ, ಗಾಯದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್​ ಕೊಹ್ಲಿ ಎರಡನೇ ಪಂದ್ಯದಲ್ಲಿ ಆಡುತ್ತಿದ್ದಾರೆ.ಭಾರತ ಮತ್ತು ENG ಮಧ್ಯೆ ಇಂದು ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಒಡಿಶಾದ ಬಾರಾಬತಿ ಮೈದಾನದಲ್ಲಿ ಉಭಯ ತಂಡಗಳು ಸೆಣಸುತ್ತಿವೆ.

Kohli comeback after 5 months:ವಿರಾಟ್​ ಕೊಹ್ಲಿ 5 ತಿಂಗಳ ಬಳಿಕ ಏಕದಿನ ಪಂದ್ಯಕ್ಕೆ ಮರಳಿದ್ದಾರೆ. 2024ರಲ್ಲಿ ಆಗಸ್ಟ್​​ನಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಸರಣಿಯಲ್ಲಿ ಕೊಹ್ಲಿ ಆಡಿದ್ದರು. ಇದಾದ ಬಳಿಕ ಭಾರತ ಯಾವುದೇ ಏಕದಿನ ಸರಣಿ ಆಡಿರಲಿಲ್ಲ.

Kohli set to write world record:ಒಟ್ಟಾರೆ ವಿಶ್ವದ 3ನೇ ಬ್ಯಾಟರ್ ಆಗಲಿದ್ದಾರೆ. ಇದಕ್ಕೂ ಮೊದಲು ​ಸಚಿನ್​ ತೆಂಡೂಲ್ಕರ್​ ಮತ್ತು ಶ್ರೀಲಂಕಾದ ಸಂಗಕ್ಕಾರ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್​ ಪೂರ್ಣಗೊಳಿಸಿದ್ದಾರೆ. ತೆಂಡೂಲ್ಕರ್​ 350 ಇನ್ನಿಂಗ್ಸ್​ ತೆಗೆದುಕೊಂಡರೆ, ಸಂಗಕ್ಕಾರ ಈ ಸಾಧನೆ ಮಾಡಲು 378 ಇನ್ನಿಂಗ್ಸ್​ ತೆಗದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಐತಿಹಾಸಿಕ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈವರೆಗೆ 283 ಪಂದ್ಯಗಳಲ್ಲಿ 13,906 ರನ್​ ಗಳಿಸಿರುವ ಕೊಹ್ಲಿ ಏಕದಿನ ಸ್ವರೂಪದಲ್ಲಿ 14000 ರನ್​ ಪೂರ್ಣಗೊಳಿಸಲು ಅವರಿಗೆ 94 ರನ್​ ಬೇಕಿದೆ. ಈ ಪಂದ್ಯದಲ್ಲಿ ಇದು ಸಾಧ್ಯವಾದರೆ ಅತೀ ಕಡಿಮೆ ಇನ್ನಿಂಗ್ಸ್​ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್​ ಎನಿಸಿಕೊಳ್ಳಲಿದ್ದಾರೆ.

Out of Jaiswal:ಸಿಕ್ಕ ಅವಕಾಶ ಸದುಪಯೋಗ ಪಡೆಸಿಕೊಂಡ ಅಯ್ಯರ್​ ಆಂಗ್ಲರ ವಿರುದ್ಧ ಅರ್ಧಶತಕ ಬಾರಿಸಿದರು. ಆದರೆ ಓಪನರ್​ ಆಗಿ ಬಂದಿದ್ದ ಜೈಸ್ವಾಲ್​ ಸಿಂಗಲ್​ ಡಿಜಿಟ್​ಗೆ ಪೆವಿಲಿಯನ್​ ಸೇರಿದ್ದರು.ಮೊದಲ ಪಂದ್ಯ ಆಡಿದ್ದ ಯಶಸ್ವಿ ಜೈಸ್ವಾಲ್​ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ ಪಂದ್ಯಕ್ಕೆ ಕೊಹ್ಲಿ ಅಲಭ್ಯರಾಗಿದ್ದ ಕಾರಣ ವಿರಾಟ್​ ಕೊಹ್ಲಿ ಸ್ಥಾನಕ್ಕೆ ಬದಲಿ ಆಟಗಾರನಾಗಿ ಶ್ರೇಯಸ್​ ಅಯ್ಯರ್​ ತಂಡ ಸೇರಿಕೊಂಡಿದ್ದರು.

Teams-India:ರೋಹಿತ್​ ಶರ್ಮಾ (ನಾಯಕ), ವಿರಾಟ್​ ಕೊಹ್ಲಿ, ಶುಭಮನ್​ ಗಿಲ್​, ಕೆಎಲ್​ ರಾಹುಲ್ (ವಿಕೆಟ್​ ಕೀಪರ್​)​, ಶ್ರೇಯಸ್​ ಅಯ್ಯರ್​, ರವೀಂದ್ರ ಜಡೇಜಾ, ಹಾರ್ದಿಕ್​ ಪಾಂಡ್ಯ, ಅಕ್ಷರ್​​ ಪಟೇಲ್​, ಮೊಹಮ್ಮದ್​ ಶಮಿ, ಹರ್ಷಿತ್​ ರಾಣಾ, ವರುಣ್​​ ಚಕ್ರವರ್ತಿ.

England:ಜೋಸ್ ಬಟ್ಲರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್​), ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಶಾಕಿಬ್ ಮಹಮೂದ್, ಮಾರ್ಕ್ ವುಡ್.

 

ಇದನ್ನು ಓದಿರಿ :The team with the most defeats after scoring a 300 plus total

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...