spot_img
spot_img

BALLARI DC MEETING : ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆ ಮುಂಚೆ, ಸಂಜೆ 6 ಗಂಟೆ ನಂತರ ಕರೆ ಮಾಡುವಂತಿಲ್ಲ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bellary News:

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಹಾಗೂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

BALLARI DC MEETING ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಖಡಕ್ ಸೂಚನೆ ನೀಡಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕುರಿತಾಗಿ ಈಗಾಗಲೇ ಸಿಎಂ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಸುಗ್ರಿವಾಜ್ಞೆ ತರುವ ಕೆಲಸ ಮಾಡುತ್ತಿದ್ದಾರೆ. BALLARI DC MEETING ಮುಂದಿನ ದಿನಗಳಲ್ಲಿ ಕಾಯ್ದೆಯು ಜಾರಿಗೆ ಬರಲಿದೆ ಎಂದು ತಿಳಿಸಿದರು.

BALLARI DC MEETING  ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ವರದಿಯಾಗಿಲ್ಲ. ಕಂಪನಿಗಳ ಪದಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಉತ್ತಮ ಭಾಂದವ್ಯ ಇಟ್ಟುಕೊಳ್ಳಬೇಕು. ಕಿರುಕುಳ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

Compliance with RBI guidelines is mandatory:

ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು.

BALLARI DC MEETING ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆದವರೊಂದಿಗೇ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದರು.

No Harassment:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತಾನಾಡಿ, ಜಿಲ್ಲೆಯಲ್ಲಿ ಒಟ್ಟು 118 ಮೈಕ್ರೋ ಫೈನಾನ್ಸ್ ಕಂಪನಿಗಳಿದ್ದು, ಅದರಲ್ಲಿ 27 ಕಂಪನಿಗಳು ಮಾತ್ರ ಆರ್‌ಬಿಐ ನಡಿ ಅಧೀಕೃತವಾಗಿ ನೋಂದಾಯಿಸಿಕೊಂಡಿವೆ. ಇನ್ನುಳಿದ 97 ಕಂಪನಿಗಳು ನೋಂದಾಯಿಸಿಕೊಂಡಿಲ್ಲ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೀಡಬೇಕು.

ಅಧಿಕಾರಿ ಮತ್ತು ಸಿಬ್ಬಂದಿ ಎಸ್‌ಪಿ ಕಚೇರಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ತಾವು ನೇಮಕಗೊಂಡಿರುವ ಕುರಿತು ದಾಖಲೆಗಳ ಪರಿಶೀಲನೆ ಮಾಡಿಸಬೇಕು. ಇದರಿಂದ ವಸೂಲಾತಿಗೆ ತೆರಳುವ ಏಜೆಂಟರುಗಳ ಮಾಹಿತಿ ಇರುತ್ತದೆ.

ಮುಖ್ಯವಾಗಿ ಸಾಲ ವಸೂಲಾತಿಗೆ ಬೆಳಗ್ಗೆ 09 ಗಂಟೆಯ ಮುಂಚೆ ಮತ್ತು ಸಂಜೆ 06 ಗಂಟೆಯ ನಂತರ ಕರೆ ಮಾಡುವುದಾಗಲೀ, ಮನೆಯ ಬಳಿ ಹೋಗುವುದಾಗಲೀ ಮಾಡುವಂತಿಲ್ಲ. ಅನಗತ್ಯವಾಗಿ ಮಾನಹಾನಿ, ಕಿರುಕುಳ ನೀಡುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಕೇಸ್ ದಾಖಲು ಮಾಡಿಕೊಳ್ಳಲಾಗುವುದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾರ್ಗಸೂಚಿ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು. ಪಡೆದ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಾರಣಕ್ಕೂ ಕಿರುಕುಳ ನೀಡುವಂತಿಲ್ಲ ಎಂದು ಇದೇ ವೇಳೆ ಅವರು ತಾಕೀತು ಮಾಡಿದರು.

Do not stress:

ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲಾ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು.

ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು ಎಂದು ಇದೇ ವೇಳೆ ಅವರು ಹೇಳಿದರು.

Call the helpline number:

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪಿ.ಪ್ರಮೋದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಿರೀಶ್ ವಿ. ಕುಲಕರ್ಣಿ ಸೇರಿದಂತೆ ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹಣ ವಸೂಲಾತಿ ನೆಪದಲ್ಲಿ ಮಾನಹಾನಿ ಇಲ್ಲವೇ ಕಿರುಕುಳ ನೀಡುವುದು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 9480803000ಗೆ ಕರೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದರು. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ವಿಧಾನಗಳು, ದಂಡದ ಪ್ರಮಾಣಗಳನ್ನು ಸಭೆಯಲ್ಲಿ ತಿಳಿಸಲಾಯಿತು.

ಇದನ್ನು ಓದಿರಿ : Pune Driver Latest GBS Fatality, Toll Rises To 7; Confirmed Case Tally At 167

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...