IND vs ENG, 3rd ODI:
IND VS ENG 3RD ODI ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2 ಪಂದ್ಯಗಳನ್ನು ಗೆದ್ದುಕೊಂಡಿದ್ದು 1 ಪಂದ್ಯಕ್ಕೂ ಮೊದಲೇ ಸರಣಿ ಕೈವಶಪಡಿಸಿಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕದ ನೆರವಿನಿಂದ ಭಾರತ ಆಂಗ್ಲರನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಇದೀಗ ಮೂರನೇ ಪಂದ್ಯವನ್ನೂ ಗೆದ್ದು ಇಂಗ್ಲೆಂಡ್ ವಿರುದ್ಧ ಹಳೆಯ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ತವಕಿಸುತ್ತಿದೆ.
Modi Maidan Record:
IND VS ENG 3RD ODI ಈ ಮೈದಾನದಲ್ಲಿ ಎರಡೂ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. ಇಲ್ಲಿ ಭಾರತ 20 ಏಕದಿನ ಪಂದ್ಯಗಳನ್ನು ಆಡಿದ್ದು ಅದರಲ್ಲಿ 11 ಪಂದ್ಯಗಳನ್ನು ಗೆದ್ದು 9 ಪಂದ್ಯಗಳಲ್ಲಿ ಸೋತಿದೆ. ಇಂಗ್ಲೆಂಡ್ 4 ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಉಭಯ ತಂಡಗಳು ಈವರೆಗೆ ಒಟ್ಟು 108 ಏಕದಿನ ಪಂದ್ಯಗಳನ್ನಾಡಿವೆ. ಇವುಗಳಲ್ಲಿ ಭಾರತ 58 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಇಂಗ್ಲೆಂಡ್ 44 ಬಾರಿ ಗೆಲುವು ಸಾಧಿಸಿದೆ. ಉಳಿದಂತೆ 3 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡು, 2 ಪಂದ್ಯ ರದ್ದಾಗಿವೆ.
Which is an old revenge?:
ಹಿಂದೆ ಮೊಟೆರಾ ಎಂದು ಕರೆಯಲಾಗುತ್ತಿದ್ದ ಈ ಮೈದಾನದಲ್ಲಿ 1981ರಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು. ಇಂಗ್ಲೆಂಡ್ 5 ವಿಕೆಟ್‌ಗಳಿಂದ ಜಯಗಳಿಸಿತ್ತು. ಇದೀಗ ಆಂಗ್ಲರ ವಿರುದ್ಧ ಗೆದ್ದು 44 ವರ್ಷದ ಹಳೆಯ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.
Possible Teams- India:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್/ ರಿಷಭ್ ಪಂತ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.
England:
ಜೋಸ್ ಬಟ್ಲರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಹ್ಯಾರಿ ಬ್ರೂಕ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಶಾಕಿಬ್ ಮಹಮೂದ್
ಇದನ್ನು ಓದಿರಿ : PM Modi Meets Pichai In France, Discusses ‘India’s Digital Transformation’