spot_img
spot_img

INVEST KARNATAKA 2025:ಕರ್ನಾಟಕದಲ್ಲಿ ಅಮೆರಿಕದ ಲ್ಯಾಮ್ ರಿಸರ್ಚ್ ಕಂಪೆನಿಯಿಂದ ₹10 ಸಾವಿರ ಕೋಟಿ ಹೂಡಿಕೆ

spot_img
spot_img

Share post:

Bangalore News:

ಲ್ಯಾಮ್ ರಿಸರ್ಚ್ ಒಂದು ಅಮೆರಿಕನ್ ಕಂಪನಿಯಾಗಿದ್ದು, ಅದು ಸೆಮಿಕಂಡಕ್ಟರ್ ಉತ್ಪಾದನೆಗೆ ಅಗತ್ಯವಾದ ಸಾಧನಗಳನ್ನು ಅಭಿವೃದ್ಧಿಪಡಿಸುತ್ತದೆ. ಈ ಉಪಕರಣಗಳನ್ನು ವೇಫರ್ ಸಂಸ್ಕರಣೆ ಮತ್ತು ಸೆಮಿಕಂಡಕ್ಟರ್ ಸಾಧನಗಳ ವೈರಿಂಗ್​​ನಲ್ಲಿ ಬಳಸಲಾಗುತ್ತದೆ.ಲ್ಯಾಮ್ ರಿಸರ್ಚ್ ಮುಂದಿನ ಕೆಲವು ವರ್ಷಗಳಲ್ಲಿ KARNATAKA ದಲ್ಲಿ 10 ಸಾವಿರ ಕೋಟಿ ರೂ.

ಹೂಡಿಕೆ ಮಾಡಲಿದೆ. ಇನ್ವೆಸ್ಟ್ KARNATAKA 2025 ಜಾಗತಿಕ ಸಮಾವೇಶದಲ್ಲಿ ಲ್ಯಾಮ್ ರಿಸರ್ಚ್‌ನ ಗ್ಲೋಬಲ್ ಪ್ರಾಡಕ್ಟ್ಸ್ ಗ್ರೂಪ್‌ನ ಹಿರಿಯ ಉಪಾಧ್ಯಕ್ಷ ಶೇಷಾ ವರದರಾಜನ್ ಈ ಘೋಷಣೆ ಮಾಡಿದ್ದಾರೆ.ಅಮೆರಿಕದ ಕಂಪೆನಿ ಲ್ಯಾಮ್ ರಿಸರ್ಚ್​ನಿಂದ KARNATAKA ದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ 10 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದೆ. ಇನ್ವೆಸ್ಟ್ KARNATAKA 2025 ಸಮಾವೇಶದಲ್ಲಿ ಈ ಒಡಂಬಡಿಕೆ ನಡೆದಿದೆ.ಈ ಘೋಷಣೆ ಮತ್ತು ಹೂಡಿಕೆಯು KARNATAKA ದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ಒಂದು ದೊಡ್ಡ ಸೇರ್ಪಡೆಯಾಗಿದೆ. ಇದು ಈ ಕ್ಷೇತ್ರಗಳಲ್ಲಿನ KARNATAKA ದ ವಿಶ್ವಾಸ ಮತ್ತು ಸಾಮರ್ಥ್ಯವನ್ನು ತೋರಿಸುತ್ತದೆ. ಯೋಜಿತ ಹೂಡಿಕೆಗಾಗಿ ಕೆಐಎಡಿಬಿ ಒಡೆತನದ ಜಮೀನನ್ನು ಮೀಸಲಿಡಲು ಲ್ಯಾಮ್ ರಿಸರ್ಚ್ KARNATAKA ಸರ್ಕಾರದೊಂದಿಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ.

Drive to Future of Innovation Expo:ಇದನ್ನು ಗಮನದಲ್ಲಿ ಇಟ್ಟುಕೊಂಡು ಏರ್ಪಡಿಸಿರುವ ‘ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜತೆಯಾಗಿ ಬುಧವಾರ ಚಾಲನೆ ನೀಡಿದರು.ಇದೇ ವೇಳೆ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನರ ಗಮನ ಸೆಳೆಯುತ್ತಿರುವುದೆಂದರೆ, ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ.

ಜೊತೆಗೆ, ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ ಎನ್ನಲಾಗುತ್ತಿರುವ ಅಗ್ರಿ-ಟೆಕ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗ ಪತ್ತೆ ಮತ್ತು ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ಅವರು ತಿಳಿದುಕೊಂಡರು.ಬಳಿಕ ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಇಬ್ಬರೂ KARNATAKA ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಎಕ್ಸ್-ಪೋ ಕುರಿತು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ”ಇದರಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು” ಎಂದರು.

ಪಾಲ್ಗೊಂಡಿರುವ ಕಂಪನಿಗಳಲ್ಲಿ ಜಿ.ಇ.ಹೆಲ್ತ್ ಕೇರ್, ಹೀರೋ ಫ್ಯೂಚರ್ ಎನರ್ಜೀಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಶನ್, ಗೆಲಾಕ್ಸಿ ಸ್ಪೇಸ್, ಲ್ಯಾಮ್ ರೀಸರ್ಚ್ ಪ್ರಮುಖವಾಗಿವೆ. KARNATAKA ಪೆವಿಲಿಯನ್​​ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್, ಫ್ಲಕ್ಸ್ ಆಟೋ ಮುಂತಾದ ಉದ್ಯಮಗಳಿವೆ.ಮುಖ್ಯವಾಗಿ ಇಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಮತ್ತು ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಪಾಲ್ಗೊಂಡಿವೆ. ಜೊತೆಗೆ, ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ‘KARNATAKA ಪೆವಿಲಿಯನ್’ ಕೂಡ ಇದೆ.

 

ಇದನ್ನು ಓದಿರಿ :NOT A AINGLE CAR HAS BEEN SOLD:ಜನವರಿಯಲ್ಲಿ ಈ ಕಾರು ಒಂದೇ ಒಂದು ಮಾರಾಟವಾಗಿಲ್ಲ!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...