spot_img
spot_img

PAKISATN VS NEW ZEALAND ODI: ವಿರಾಟ್ ಕೊಹ್ಲಿ ದಾಖಲೆ ಮುರಿದು ನಂಬರ್ 1 ಸ್ಥಾನಕ್ಕೇರಿದ ಬಾಬರ್ ಅಜಮ್

spot_img
spot_img

Share post:

Karachi News:

ಕರಾಚಿಯಲ್ಲಿ ನಡೆಯತ್ತಿರುವ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯಲ್ಲಿ PAKISATNದ ಬಾಬರ್​ ಅಜಮ್​ ದಾಖಲೆ ಬರೆದಿದ್ದಾರೆ.ಕರಾಚಿಯಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಕ್ರಿಕೆಟ್‌ ಸರಣಿಯ ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ 29 ರನ್​ ಗಳಿಸಿ ಔಟಾದರೂ ಬಾಬರ್​ ದಾಖಲೆ ಬರೆದರು. ಸೈಮನ್​ ಟಫಿ ಎಸೆದ 7ನೇ ಓವರ್​ನ 3ನೇ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 6 ಸಾವಿರ ರನ್​ ಪೂರ್ಣಗಳಿಸಿ ಅಶಿಮ್​ ಆಮ್ಲಾ ದಾಖಲೆ ಸಮಗಟ್ಟಿದರು.

ಈ ಪಂದ್ಯಕ್ಕೂ ಮುನ್ನ ಬಾಬರ್ ಅಜಮ್ 122 ಏಕದಿನ ಇನ್ನಿಂಗ್ಸ್‌ನಲ್ಲಿ 5990 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ 10 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದರು.PAKISATNದ ಸ್ಟಾರ್​ ಬ್ಯಾಟರ್ ಬಾಬರ್ ಅಜಮ್ ಏಕದಿನ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇದರೊಂದಿಗೆ ಭಾರತದ ಸ್ಟಾರ್​ ಬ್ಯಾಟರ್​ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ಜೊತೆಗೆ, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಶಿಮ್ ಆಮ್ಲಾ ಅವರನ್ನು ಸರಿಗಟ್ಟಿದ್ದಾರೆ.

Joint Document:ಬಾಬರ್, ಅಶಿಮ್​ ಆಮ್ಲಾ ಮತ್ತು ವಿರಾಟ್ ನಂತರ ಏಕದಿನ ಪಂದ್ಯಗಳಲ್ಲಿ 6000 ರನ್ ಪೂರೈಸಿದ ಟಾಪ್ -5 ಆಟಗಾರರಲ್ಲಿ ಕೇನ್ ವಿಲಿಯಮ್ಸನ್ ಮತ್ತು ಡೇವಿಡ್ ವಾರ್ನರ್ ಕೂಡ ಸೇರಿದ್ದಾರೆ. ಕೇನ್ ವಿಲಿಯಮ್ಸನ್​ ಮತ್ತು ವಾರ್ನರ್ 139 ಇನ್ನಿಂಗ್ಸ್‌ನಲ್ಲಿ 6 ಸಾವಿರ ರನ್​ ಗಳಿಸಿದ್ದಾರೆ.

ಆಮ್ಲಾ ಮತ್ತು ಬಾಬರ್ ನಂತರ, ಕೊಹ್ಲಿ ಏಕದಿನ ಪಂದ್ಯಗಳಲ್ಲಿ ವೇಗವಾಗಿ ಪೂರ್ಣಗೊಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಬಾಬರ್​ 123 ಇನ್ನಿಂಗ್ಸ್​ನಲ್ಲಿ ಈ ಮೈಲಿಗಲ್ಲು ತಲುಪಿದರೆ, ವಿರಾಟ್ ಕೊಹ್ಲಿ 136 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರು.ಈ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.

ಮೊದಲ ಇನ್ನಿಂಗ್ಸ್​ನಲ್ಲಿ 242 ರನ್​ಗಳಿಗೆ ಸರ್ವಪತನ ಕಂಡಿತು.ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ತ್ರಿಕೋನ ಸರಣಿಯ ಅಂತಿಮ ಪಂದ್ಯದಲ್ಲಿ ಬಾಬರ್ ಅಜಮ್ 29 ರನ್‌ಗಳ ಇನ್ನಿಂಗ್ಸ್ ಆಡಿದರು. ಫಖರ್ ಜಮಾನ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಅವರು 34 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 29 ರನ್ ಗಳಿಸಿದರು.ಈ ಗುರಿ ಬೆನ್ನತ್ತಿರುವ ನ್ಯೂಜಿಲೆಂಡ್​ 17.2 ಓವರ್​ ವೇಳೆಗೆ 2 ವಿಕೆಟ್​ ಕಳೆದುಕೊಂಡು 76 ರನ್​ ಕಲೆಹಾಕಿದೆ. ಆರಂಭಿಕ ಬ್ಯಾಟರ್​ ವಿಲ್​ ಯಂಗ್​ 5, ಕೇನ್​ ವಿಲಿಯಮ್ಸನ್​ 34 ರನ್​ ಗಳಿಸಿ ಪೆವಿಲಿಯನ್​ ಸೇರಿದ್ದಾರೆ.

 

ಇದನ್ನು ಓದಿರಿ :Watch: Shaheen Afridi & Breetzke Involve In Heated Exchange During Do-Or-Die Clash

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...