ICC Champions Trophy-2025:
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪ್ರಾರಂಭವಾಗಿದೆ. ಪಾಕಿಸ್ತಾನದ ಕರಾಚಿ ಮೈದಾನದಲ್ಲಿ ಭಾರತದ ತಿರಂಗ ಧ್ವಜ ಹಾರಾಡುತ್ತಿದೆ. INDIAN FLAG CONTROVERSY IN PAKISTAN ಐಸಿಸಿ ನಿಯಮದ ಪ್ರಕಾರ, ಐಸಿಸಿ ಆಯೋಜಿತ ಟೂರ್ನಿಗಳಲ್ಲಿ ಭಾಗಿಯಾಗುವ ಪ್ರತಿಯೊಂದು ತಂಡಗಳ ರಾಷ್ಟ್ರಧ್ವಜವನ್ನು ಪ್ರದರ್ಶಿಸಬೇಕು. \
ಆದರೆ ಚಾಂಪಿಯನ್ಸ್ ಟ್ರೋಫಿ ಪ್ರಾರಂಭಕ್ಕೂ ಮೊದಲು ಪಾಕಿಸ್ತಾನ, ಪಂದ್ಯಗಳು ನಡೆಯುತ್ತಿರುವ ಕ್ರೀಡಾಂಗಣಗಳಾದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಮೈದಾನಗಳಲ್ಲಿ ಭಾರತದ ಧ್ವಜವನ್ನು ಹೊರತುಪಡಿಸಿ ಉಳಿದೆಲ್ಲಾ ದೇಶಗಳ ಧ್ವಜವನ್ನು ಪ್ರದರ್ಶಿಸಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ INDIAN FLAG CONTROVERSY IN PAKISTAN ಕಾರಣವಾಗಿತ್ತು.
ಇಂದಿನಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಾರಂಭವಾಗಿದೆ. 8 ವರ್ಷಗಳ ಬಳಿಕ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದೆ. ಇಂದು ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಬರುತ್ತಿಲ್ಲ.
ಹಾಗಾಗಿ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಡುವ ತಂಡಗಳ ಧ್ವಜಗಳನ್ನು ಮಾತ್ರ ಪ್ರದರ್ಶಿಸಿದ್ದೇವೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಬಾಂಗ್ಲಾದೇಶ ಇನ್ನೂ ಪಾಕಿಸ್ತಾನವನ್ನು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಆ ಎರಡೂ ದೇಶಗಳ ರಾಷ್ಟ್ರಧ್ವಜಗಳನ್ನು ಪ್ರದರ್ಶಿಸಿಲ್ಲ ಎಂದು ಸಮಜಾಯಿಷಿ ನೀಡಿತ್ತು.
ಈ ಎಲ್ಲ ಬೆಳವಣಿಗೆಯ ನಂತರ ಇದೀಗ ಕರಾಚಿ ಮೈದಾನದಲ್ಲಿ ತಿರಂಗ ಧ್ವಜವನ್ನು ಪ್ರದರ್ಶಿಸಿದೆ. ಈ ಬಾರಿಯ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. INDIAN FLAG CONTROVERSY IN PAKISTAN ದುಬೈ ಮತ್ತು ಪಾಕಿಸ್ತಾನಗಳಲ್ಲಿ ಪಂದ್ಯಗಳು ಏರ್ಪಾಡಾಗಿವೆ.
ಭಾರತ ತನ್ನೆಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಉಳಿದ ತಂಡಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಕರಾಚಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಎಲ್ಲಾ ರಾಷ್ಟ್ರಗಳ ಜೊತೆ ಭಾರತದ ಧ್ವಜವನ್ನೂ ಪ್ರದರ್ಶಿಸಲಾಗಿದೆ. ನಾಳೆಯಿಂದ ಭಾರತ ತನ್ನ ಅಭಿಯಾನ ಪ್ರಾರಂಭಿಸಲಿದೆ.
India Matches:
- ಫೆ.20ರಂದು ಭಾರತ-ಬಾಂಗ್ಲಾದೇಶ ಪಂದ್ಯ.
- ಫೆ.23ರಂದು ಭಾರತ-ಪಾಕಿಸ್ತಾನ ಪಂದ್ಯ.
- ಮಾ.2ರಂದು ಭಾರತ-ನ್ಯೂಜಿಲೆಂಡ್ ಪಂದ್ಯ.
ಟೂರ್ನಿಯಲ್ಲಿ 8 ತಂಡಗಳು ಗುಂಪು ಹಂತದಲ್ಲಿ ತಲಾ ಮೂರು ಪಂದ್ಯಗಳನ್ನು ಆಡಲಿವೆ. ಎ ಮತ್ತು ಬಿ ಗುಂಪುಗಳಲ್ಲಿ ತಲಾ ನಾಲ್ಕು ತಂಡಗಳಿವೆ.
ಇದನ್ನು ಓದಿರಿ : India Has Potential In Agri, Eco, Rural & Village Tourism, But Needs More Attention: Experts