New Delhi News:
DELHIಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಈ ಸಭೆಯನ್ನು ಆಯೋಜಿಸಲಾಗಿದೆ. ಪ್ರಮಾಣವಚನದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಎನ್ಡಿಎ ಮೈತ್ರಿಕೂಟದ ಸಿಎಂಗಳು ಭಾಗಿಯಾಗಿದ್ದರು.
ಎನ್ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಾಯನ್ಸ್) ನೇತೃತ್ವದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ರಾಷ್ಟ್ರ ರಾಜಧಾನಿ DELHIಯ ಇಂಪಿರಿಯಲ್ ಹೊಟೇಲ್‌ನಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.ಎನ್ಡಿಎ ನೇತೃತ್ವದಲ್ಲಿ ಸರ್ಕಾರ ರಚಿಸಿರುವ ರಾಜ್ಯಗಳಾದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದಾರೆ.
ಎನ್‌ಡಿಎ ಸಿಎಂಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಭಾಗಿಯಾಗಿದ್ದಾರೆ.ಎನ್ಡಿಎ ಮೈತ್ರಿಕೂಟದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಮಧ್ಯ ಪ್ರದೇಶ ಸಿಎಂ ಡಾ.ಮೋಹನ್ ಯಾದವ್, ರಾಜಸ್ಥಾನ್ ಸಿಎಂ ಭಜನ್ ಲಾಲ್ ಶರ್ಮಾ, ತ್ರಿಪುರ ಸಿಎಂ ಮಣಿಕ್ ಸಾಹ ಕೂಡ ಭಾಗಿಯಾಗಿದ್ದಾರೆ.