spot_img
spot_img

OTT ADVISORY : ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಿದ ಅಶ್ಲೀಲತೆ

spot_img
spot_img

Share post:

New Delhi News:

ವಿವಿಧ ಪ್ಲಾರ್ಟ್​ಫಾರ್ಮ್​ಗಳಲ್ಲಿ ಪ್ರಸಾರವಾಗುವ ಕಂಟೆಂಟ್​ಗಳಲ್ಲಿ ಅಶ್ಲೀಲತೆ ನಿಯಂತ್ರಿಸಲು ಎಲ್ಲ OTT ADVISORY ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಒಟಿಟಿ ವೇದಿಕೆಗಳಲ್ಲಿ ಕಾನೂನಿನಡಿ ನಿಷೇಧಿತ ಮತ್ತು ಸಮಾಜದ ಮೇಲೆ ಋಣಾತ್ಮಕ ಪರಿಣಾಮ ಬೀರುವ ಕಾರ್ಯಕ್ರಮ, ಕಂಟೆಂಟ್​​ಗಳ ಪ್ರಸಾರ ಮಾಡುವುದರ ವಿರುದ್ಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಗರಂ ಆಗಿದೆ.

ಯೂಟ್ಯೂಬರ್​ ಅಲಹಾಬಾದಿಯಾ ಆಕ್ಷೇಪಾರ್ಹ ಹಾಸ್ಯವು ಭಾರೀ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಒಟಿಟಿಗಳಲ್ಲಿ ಪ್ರಸಾರವಾಗುವ ಅಶ್ಲೀಲ ಕಂಟೆಂಟ್​​ಗಳ ಮೇಲೆ ನಿಯಂತ್ರಣ ಹೇರಲು ಎಲ್ಲ ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

OTT ADVISORY ಯಾವುದೇ ಕಂಟೆಂಟ್​ ಪ್ರಸಾರಕ್ಕೂ ಮುನ್ನ ವಯಸ್ಸಿನ ಆಧಾರದ ಮೇಲೆ ವರ್ಗೀಕರಣ ಸೇರಿದಂತೆ ಐಟಿ ನಿಯಮಗಳು 2021ರ ಅಡಿಯಲ್ಲಿ ಸೂಚಿಸಿದ ನೀತಿ ಸಂಹಿತೆಗೆ ಅನುಗುಣವಾಗಿರಬೇಕು ಎಂದು ಒಟಿಟಿ ಪ್ಲಾರ್ಟ್​ಫಾರ್ಮ್​ಗಳು ಮತ್ತು ಸ್ವಯಂ ನಿಯಂತ್ರಕ ಸಂಸ್ಥೆಗಳಿಗೆ ಮಾರ್ಗಸೂಚಿಯಲ್ಲಿ ಹೇಳಿದೆ.

ಹಾಗೊಂದು ವೇಳೆ ನಿಯಮ, ನೀತಿ ಸಂಹಿತೆಗಳನ್ನು ಉಲ್ಲಂಘಿಸಿ ಸದಭಿರುಚಿರಹಿತ ಕಂಟೆಂಟ್​ಗಳನ್ನು ಪ್ರಸಾರ ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒಟಿಟಿ ಪ್ಲಾರ್ಟ್​ಫಾರ್ಮ್​ಗಳ ನಿಯಂತ್ರಕ ಸಂಸ್ಥೆಗೆ ಸಲಹೆ ನೀಡಿದೆ.

Complaint against obscenity:

OTT ADVISORYಗಳಲ್ಲಿ ಪ್ರಸಾರವಾಗುವ ಕಂಟೆಂಟ್​​ಗಳಲ್ಲಿ ಅಶ್ಲೀಲತೆ ಇದ್ದಲ್ಲಿ, ಅದಕ್ಕೆ ‘ಎ’ ಸರ್ಟಿಫಿಕೇಟ್​ ಕಾರ್ಯವಿಧಾನ ಅಳವಡಿಸಬೇಕು. ಸೂಕ್ತ ಎಚ್ಚರಿಕೆಯನ್ನೂ ನೀಡಬೇಕು. ಇಂತಹ ಕಂಟೆಂಟ್​ಗಳು ಮಕ್ಕಳ ಗ್ರಹಣಕ್ಕೆ ಸಿಗಬಾರದು ಎಂದೂ ಸಲಹೆ ನೀಡಿದೆ.

ಆನ್‌ಲೈನ್ ಕ್ಯುರೇಟೆಡ್ ಕಂಟೆಂಟ್​ (ಒಟಿಟಿ ವೇದಿಕೆಗಳು) ಮತ್ತು ಕೆಲವು ಸಾಮಾಜಿಕ ಮಾಧ್ಯಮಗಳು ಪ್ರಕಟಿಸಿದ ಅಶ್ಲೀಲ, ಅಸಹ್ಯಕರ ಮತ್ತು 18+ ಕಂಟೆಂಟ್​​ಗಳ ಕುರಿತಂತೆ ಸಂಸತ್ತಿನ ಸದಸ್ಯರು, ಶಾಸನಬದ್ಧ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಹೀಗಾಗಿ, ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿರುವ ಯಾವುದೇ ಕಂಟೆಂಟ್​ಗಳನ್ನು ಪ್ರಸಾರ ಮಾಡುವ ಮುನ್ನ ಕಾನೂನಿನ ವಿವಿಧ ನಿಬಂಧನೆಗಳು ಮತ್ತು 2021 ರ ಐಟಿ ನಿಯಮಗಳಲ್ಲಿ ಸೂಚಿಸಲಾದ ನೀತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. OTT ADVISORY  ವಯಸ್ಸಿನ ಆಧಾರಿತ ವರ್ಗೀಕರಣವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಇದನ್ನು ಓದಿರಿ : Unemployed Andhra Pradesh Youth Easy Prey For International Cyber Fraud Gangs

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...