ಬೆಂಕಿ ಕೆನ್ನಾಲಿಗೆಗೆ ಗಿಡ-ಮರಗಳು ಸುಟ್ಟು ಕರಕಲಾಗಿವೆ. ಬೆಟ್ಟದ ಸುತ್ತ ನೂರಾರು ಎಕರೆಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ. ಇನ್ನೂ ಬೆಂಕಿ ತಹಬದಿಗೆ ಸಿಗುತ್ತಿಲ್ಲ. ಬೆಂಕಿ ಹಿನ್ನೆಲೆ ಸಾರ್ವಜನಿಕರಿಗೆ ಉತ್ತನಹಳ್ಳಿ ರಸ್ತೆ ಬಂದ್ ಮಾಡಲಾಗಿದೆ.
ಬೆಂಕಿ ನಿಯಂತ್ರಣಕ್ಕೆ ಸಿಗದಿರುವ ಹಿನ್ನೆಲೆಯಲ್ಲಿ ಭಾರೀ ಆತಂಕ ಎದುರಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಯ ಕೆನ್ನಾಲಿಗೆಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಮಾಡಲಾಗುತ್ತಿದೆ.
ಇದನ್ನು ಓದಿರಿ : Banks’ New Offer for Green Loans: IIM Research