spot_img
spot_img

AYUSHMAN BHARAT SCHEME:10 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅರ್ಹತೆ ಪರಿಶೀಲಿಸುವುದು ಹೇಗೆ?

spot_img
spot_img

Share post:

New Delhi News:

ಅದರಂತೆ, ಈಗ ದೆಹಲಿಯ ಜನರು AYUSHMAN ಯೋಜನೆಯಡಿ ಕೇಂದ್ರ ಸರ್ಕಾರದಿಂದ ಐದು ಲಕ್ಷ ರೂಪಾಯಿಗಳವರೆಗೆ ಮತ್ತು ದೆಹಲಿ ಸರ್ಕಾರದಿಂದ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಪಡೆಯುವ ಸೌಲಭ್ಯವನ್ನು ಹೊಂದಿರುತ್ತಾರೆ.ದೆಹಲಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಆರಂಭಿಸಲಾಗಿದೆ. ಚುನಾವಣೆ ಭರವಸೆಯಂತೆ ಮೊದಲ ಕ್ಯಾಬಿನೆಟ್​ ಸಭೆಯಲ್ಲೇ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ದೆಹಲಿಯ ಹೊಸ ಮುಖ್ಯಮಂತ್ರಿ ರೇಖಾ ಗುಪ್ತಾ ಗುರುವಾರ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳನ್ನು ದೆಹಲಿಯ ಜನರಿಗೆ ಒದಗಿಸುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ.

Implementation of Ayushman Bharat in Delhi:ಕಡಿಮೆ ಆದಾಯದ ಗುಂಪುಗಳ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರವು 2018 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಗಳವರೆಗೆ ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ.

ದೆಹಲಿಯಲ್ಲಿ, ಈ ಯೋಜನೆಯಡಿ 10 ಲಕ್ಷ ರೂ.ಗಳವರೆಗೆ ಆರೋಗ್ಯ ರಕ್ಷಣೆ ಲಭ್ಯವಿರುತ್ತದೆ.ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (ಪಿಎಂಜೆಎವೈ) ಎಂದೂ ಕರೆಯಲ್ಪಡುವ AYUSHMAN ಭಾರತ್ ಯೋಜನೆಯನ್ನು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ದೆಹಲಿಯಲ್ಲಿ ಜಾರಿಗೆ ತಂದಿರಲಿಲ್ಲ. ಅದಕ್ಕಾಗಿಯೇ ಬಿಜೆಪಿ ಇದನ್ನು ಚುನಾವಣೆಯಲ್ಲಿ ಒಂದು ವಿಷಯವನ್ನಾಗಿ ಮಾಡಿತ್ತು.

Here is how you can benefit from the scheme: ಆಸ್ಪತ್ರೆಯ ಸಹಾಯ ಕೇಂದ್ರವನ್ನು ಸಂಪರ್ಕಿಸುವ ಮೂಲಕ ಅಥವಾ ಅಧಿಕೃತ AYUSHMAN ಭಾರತ್ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಇದನ್ನು ದೃಢೀಕರಿಸಿಕೊಳ್ಳಬಹುದು.AYUSHMAN ಯೋಜನೆಯ ಪ್ರಯೋಜನಗಳನ್ನು ಪಡೆಯಲು, ನೋಂದಾಯಿತ ಆಸ್ಪತ್ರೆಗೆ ಭೇಟಿ ನೀಡಿ. ನೀವು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ AYUSHMAN ಭಾರತ್ ಯೋಜನೆಯ ಭಾಗವಾಗಿದೆ ಎಂದು ಖಚಿತಪಡಿಸಿಕೊಳ್ಳಿ.

Identity Verification:ಮ್ಮೆ ದೃಢಪಟ್ಟ ನಂತರ, ನೀವು ನಗದುರಹಿತ ಚಿಕಿತ್ಸೆಯನ್ನು ಪಡೆಯಬಹುದು. ನಿಮ್ಮ ಕ್ಲೈಮ್ ಅನ್ನು ಆಸ್ಪತ್ರೆ ಮತ್ತು ಸ್ಕೀಮ್ ಆಡಳಿತವು ನೇರವಾಗಿ ಪ್ರಕ್ರಿಯೆಗೊಳಿಸುತ್ತದೆ.ನಿಮ್ಮ AYUSHMAN ಭಾರತ್ ಕಾರ್ಡ್ ಅಥವಾ ಅಧಿಕೃತವಾಗಿ ನೀಡಲಾದ ಯಾವುದೇ ದಾಖಲೆಯನ್ನು ಆಸ್ಪತ್ರೆಯ ಸಹಾಯ ಕೇಂದ್ರದಲ್ಲಿ ತೋರಿಸಿ. ನಂತರ ಸಿಬ್ಬಂದಿ ನಿಮ್ಮ ಅರ್ಹತೆ ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಾರೆ.

How to Check Eligibility Online?:AYUSHMAN ಭಾರತ್ ಯೋಜನೆಯಡಿ ಚಿಕಿತ್ಸೆಯು ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿದೆ ಎಂಬುದು ಗೊತ್ತಿರಲಿ. ಫಲಾನುಭವಿಗಳು ತಮ್ಮ AYUSHMAN ಭಾರತ್ ಕಾರ್ಡ್ ಅಥವಾ ಸಂಬಂಧಿತ ದಾಖಲೆಗಳನ್ನು ನವೀಕರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.

ಪಟ್ಟಿ ಮಾಡಲಾದ ಆಸ್ಪತ್ರೆಗಳನ್ನು ಹುಡುಕಲು ಅಥವಾ ನಿಮ್ಮ ಅರ್ಹತೆಯನ್ನು ಪರಿಶೀಲಿಸಲು ಅಧಿಕೃತ ಆಯುಷ್ಮಾನ್ ಭಾರತ್ ವೆಬ್ ಸೈಟ್​ಗೆ ಭೇಟಿ ನೀಡಿ ಅಥವಾ ಯೋಜನೆಯ ಸಹಾಯವಾಣಿಯನ್ನು ಬಳಸಿ.

Documents required to get the scheme:70 ವರ್ಷಕ್ಕಿಂತ ಮೇಲ್ಪಟ್ಟವರಿಗೆ AYUSHMAN ಭಾರತ್ ಜನ ಆರೋಗ್ಯ ಯೋಜನೆಯಲ್ಲಿ ನೋಂದಾಯಿಸಲು ಆಧಾರ್ ಕಾರ್ಡ್ ಮಾತ್ರ ಅಗತ್ಯವಿದೆ. ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆಗೆ ಆಧಾರ್ ಆಧಾರಿತ ಇ-ಕೆವೈಸಿ ಕಡ್ಡಾಯವಾಗಿದೆ.

ಇದಕ್ಕಾಗಿ ಎಲ್ಲ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕಾರ್ಡ್ ನೀಡಲಾಗುತ್ತದೆ. ಇದನ್ನು beneficiary.nha.gov.in ಭೇಟಿ ನೀಡುವ ಮೂಲಕ ಪಡೆಯಬಹುದು. ಇದಕ್ಕಾಗಿ ಯಾವುದೇ ಕಾಯುವ ಅವಧಿ ಇಲ್ಲ. ಕವರೇಜ್ ತಕ್ಷಣವೇ ಪ್ರಾರಂಭವಾಗುವುದರಿಂದ ಫಲಾನುಭವಿಗಳು ದಾಖಲಾತಿಯ ಮೊದಲ ದಿನದಿಂದಲೇ ಚಿಕಿತ್ಸೆ ಪಡೆಯಲು ಪ್ರಾರಂಭಿಸಬಹುದು.

 

ಇದನ್ನು ಓದಿರಿ :Fact Check: Is Losing 33 Kg In 5 Months, As Claimed By Sidhu, Healthy?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...