spot_img
spot_img

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Ayodhya (Uttar Pradesh) News:

ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5 ಗಂಟೆಯಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ಇದು ರಾತ್ರಿಯಾದರೂ ಕಡಿಮೆ ಆಗಿರಲಿಲ್ಲ. ರಾತ್ರಿ 10 ಗಂಟೆಯವರೆಗೂ ನಿರಂತರ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದರು.

ತಡರಾತ್ರಿವರೆಗೂ ಕಾದ ಭಕ್ತರು ದರ್ಶನ ಪಡೆದು ಧನ್ಯತಾ ಭಾವ ಮೆರೆದರು. AYODHYA ರಾಮ ಮಂದಿರಕ್ಕೆ ದೇಶಾದ್ಯಂತದಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವುದರಿಂದ ನೂಕುನುಗ್ಗಲಿಗೂ ಸಾಕ್ಷಿಯಾಗಿದೆ.ಅಯೋಧ್ಯೆಯ ರಾಮ ಮಂದಿರದಲ್ಲಿ ಸರತಿ ಸಾಲುಗಳ ಮಹಾಪೂರ, ಮುಂಜಾನೆಯಿಂದ ತಡರಾತ್ರಿಯವರೆಗೆ ದರ್ಶನಕ್ಕೆ ಅವಕಾಶ. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಆಗಮಿಸಿದ್ದರು.ಪ್ರಯಾಗರಾಜ್‌ನ ಮಹಾಕುಂಭದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅನೇಕ ಭಕ್ತರು ರಾಮಲಲ್ಲಾನ ದರ್ಶನ ಪಡೆಯಲು AYODHYAಗೆ ಭೇಟಿ ನೀಡಿ ರಾಮನ ದರ್ಶನ ಮಾಡಲು ಮುಂದಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೇವಾಲಯದ ಆವರಣದಲ್ಲಿ ಲಕ್ಷಾಂತರ ಭಕ್ತರು ಸೇರುತ್ತಿದ್ದಾರೆ.

Local administration to make appropriate security arrangements:ಜನಸಂದಣಿ ನಿಯಂತ್ರಣ, ಭದ್ರತೆ ಮತ್ತು ಸಂಚಾರ ನಿರ್ವಹಣೆಗಾಗಿ 24 ಗಂಟೆಗಳ ನಿಗಾ ವಹಿಸಲಾಗಿದೆ. ಪ್ರತಿಯೊಬ್ಬರ ಉದ್ದೇಶವೂ ಒಂದೇ ಆಗಿದೆ, ರಾಮ ಲಲ್ಲಾನನ್ನು ನೋಡಿ ಆತನ ಅನುಗ್ರಹ ಪಡೆದುಕೊಳ್ಳವುದಾಗಿದೆ ಎಂದು ಅವರು ಹೇಳಿದ್ದಾರೆ.

ಸುಗಮ ದರ್ಶನಕ್ಕಾಗಿ ಆಗಮಿಸುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.ಸುಗಮ ಸಂಚಾರಕ್ಕಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಯ್ಯರ್​ ತಿಳಸಿದರು. ರಾಮ್ ಲಲ್ಲಾನ ದರ್ಶನಕ್ಕಾಗಿ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಅವರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪೊಲೀಸರು ನಗರವನ್ನು ಆರು ವಿಭಾಗಗಳು ಮತ್ತು 11 ವಲಯಗಳಾಗಿ ವಿಂಗಡಿಸಿದ್ದಾರೆ.

ಹೆಚ್ಚುತ್ತಿರುವ ಭಕ್ತರ ಭೇಟಿ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಸುರಕ್ಷತೆಯ ಕ್ರಮ ಕೈಗೊಂಡಿದೆ. ವ್ಯಾಪಕವಾದ ಜನಸಂದಣಿ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಅಯೋಧ್ಯಾದ ಎಸ್‌ಎಸ್‌ಪಿ ರಾಜ್‌ಕರನ್ ನಯ್ಯರ್ ಮಾಹಿತಿ ನೀಡಿದ್ದಾರೆ. ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ನಿರಂತರವಾಗಿ ಬರುತ್ತಿದ್ದಾರೆ. AYODHYAಗೆ ಭೇಟಿ ನೀಡುವ ಭಕ್ತರ ಸಂಖ್ಯೆ 2016-17ರಲ್ಲಿ 2.35 ಲಕ್ಷದಿಂದ 2024 ರಲ್ಲಿ 14-15 ಕೋಟಿಗೆ ಏರಿಕೆಯಾಗಿದೆ.

ಇದು ಉತ್ತರಪ್ರದೇಶದ ಆರ್ಥಿಕ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಕುಂಭಮೇಳದಲ್ಲಿ ಸ್ನಾನ ಮಾಡಲು ಹೊರಟಿರುವ ಜನರು ಅಯೋಧ್ಯಾ ಧಾಮದಲ್ಲಿ ಶ್ರೀರಾಮ ಮತ್ತು ಹನುಮಾನ್ ದರ್ಶನಕ್ಕಾಗಿ ಇಲ್ಲಿಗೆ ಬಂದಿದ್ದಾರೆ. ಸರಯೂ ನದಿಯ ದರ್ಶನ ಪಡೆಯಲು ಮತ್ತು ಸರಯೂ ನದಿಯಲ್ಲಿ ಸ್ನಾನ ಮಾಡಲು ಲಕ್ಷಾಂತರ ಭಕ್ತರು ಇಷ್ಟ ಪಡುತ್ತಿದ್ದಾರೆ ಎಂದು ಅಯೋಧ್ಯಾ ಎಸ್ಪಿ ಮಧುವನ್ ಕುಮಾರ್ ಸಿಂಗ್ ಹೇಳಿದ್ದಾರೆ.

 

ಇದನ್ನು ಓದಿರಿ :Banks’ New Offer for Green Loans: IIM Research

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

GRAPE CULTIVATION IN UNIVERSITY:ತೋಟದಲ್ಲಿ ನಡೆದಾಡುತ್ತಾ 65 ಬಗೆ ಬಗೆಯ ಹಣ್ಣುಗಳ ರುಚಿ ಸವಿಯಿರಿ!

Hyderabad News: ಅವಳಿ ನಗರದ ಎಲ್ಲೆಡೆಯಿಂದ GRAPE ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈದಾನದೆಲ್ಲಡೆ ಸುತ್ತಾಡಲು ಮತ್ತು ಹಣ್ಣಿನ ಸುವಾಸನೆ ಆನಂದಿಸಲು ಅವಕಾಶ ಕಲ್ಪಿಸಲಾಗಿದೆ. ದೇಶಾದ್ಯಂತ...