WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
Ind Was Pak News:
ಈಗಾಗಲೇ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ IND ಎರಡನೇ ಪಂದ್ಯದಲ್ಲೂ ಗೆಲುವು ಓಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಿವೀಸ್ ವಿರುದ್ದ ಹೀನಾಯವಾಗಿ ಸೋಲು ಕಂಡಿದ್ದು, ಎರಡನೇ ಪಂದ್ಯ ಗೆದ್ದು ಸೆಮೀಸ್ ಕನಸು ಜೀವತವಾಗಿರಿಸಿಕೊಳ್ಳಲು ಪ್ಲಾನ್ ಮಾಡಿಕೊಂಡಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯದಲ್ಲಿಂದು IND ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಿವೆ. ಉಭಯ ತಂಡಗಳ ನಡುವಿನ ಹೈವೋಲ್ಟೆಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.ಇದೀಗ ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ICC Champions Trophy:ಇಂದು ಚಾಂಪಿಯನ್ಸ್ ಟ್ರೋಫಿಯಲ್ಲಿ IND ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.
For a strong India arena:ಪಾಕ್ ವಿರುದ್ಧದ ಪ್ರತಿಷ್ಠೆಯ ಪಂದ್ಯಕ್ಕೆ IND ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದೆ.
Head to Head: IND-ಪಾಕಿಸ್ತಾನ ತಂಡಗಳು ಕೊನೆಯ ಬಾರಿಗೆ 2017ರ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ಎದುರುಬದುರಾಗಿದ್ದವು. ಇದರಲ್ಲಿ ಪಾಕ್ ತಂಡ INDವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು. ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಇಂದು ಮೈದಾನಕ್ಕಿಳಿಯಲಿದೆ.ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ಒಟ್ಟು 135 ಏಕದಿನ ಪಂದ್ಯಗಳು ನಡೆದಿವೆ.
ಇದರಲ್ಲಿ ಪಾಕಿಸ್ತಾನ 73 ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ. IND 57 ಪಂದ್ಯಗಳಲ್ಲಿ ಜಯಿಸಿದೆ. ಆದರೆ 5 ಪಂದ್ಯಗಳು ಯಾವುದೇ ಫಲಿತಾಂಶ ಕಾಣದೇ ರದ್ಧಾಗಿವೆ.ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡೂ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಪಾಕಿಸ್ತಾನ 3ರಲ್ಲಿ ಗೆದ್ದಿದ್ದು, ಭಾರತ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.