Ganesha Chaturthi ವೇಳೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ದೊಡ್ಡ ಕಾದಾಟ ಉಂಟಾಗಿದೆ, ರೈತರ ಮನ ಓಲೈಸಲು ರಾಜ್ಯ ಸರಕಾರ ಮಣ್ಣು ತಿಂದಿದೆ ಎನ್ನಲಾಗುತ್ತಿದೆ! ಏನು ಸುದ್ದಿ ಎಂದು ನೀವೇ ಓದಿ!
ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ. ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಜೋಶಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Ganesha Chaturthi ಪ್ರಯುಕ್ತ ಕೇಂದ್ರದಿಂದ ಬೆಂಬಲ ಬೆಲೆ
ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ” ಎಂದು ಜೋಶಿ ಆಕ್ರೋಶ ಹೊರ ಹಾಕಿದ್ದಾರೆ. ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ; ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ದರದಲ್ಲಿ 1.5 ರೂ. ಕಡಿತ?
ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಜೋಶಿ ಅಭಿಪ್ರಾಯ ಪಟ್ಟರು.ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ. ಆದರೆ, ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ.
ರಾಜ್ಯ ಸರಕಾರ ಮೋಸ ಮಾಡಿದೆ?
ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. “ಒಂದೆಡೆ ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ. 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ ಗೆ 28, 29 ರೂ. ನೀಡುತ್ತಿವೆ. ಕೆಲವೆಡೆ ಇದಕ್ಕೂ ಖೋತಾ ಆಗಿದೆ. ಇದು ಹೈನುಗಾರರ ದುರಂತ ಸ್ಥಿತಿ” ಎಂದು ಸಚಿವ ಜೋಶಿ ಆತಂಕ ವ್ಯಕ್ತ ಪಡಿಸಿದ್ದಾರೆ.
ಹಾಲಿನ ಬೆಲೆಯ ಇತಿಹಾಸ!
ಆದರೆ ರೈತರಿಗೆ ಶೇ.10 ರಷ್ಟೂ ಬೆಲೆ ಹೆಚ್ಚಿಲ್ಲ. ಈಗಲೂ 2014ರಲ್ಲಿ ಇದ್ದಷ್ಟೇ ಇದೆ. ಅತ್ಯಂತ ಕನಿಷ್ಠ ದರ 26 ರಿಂದ 29 ರೂ.ಲೀಟರ್ ಗೆ ದಕ್ಕುತ್ತಿದೆ ಎಂದು ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ.ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ.2013-14ರಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೇ ಇಷ್ಟು ಬೆಲೆಯಿದೆ. ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ.ಹಾಲು ಒಕ್ಕೂಟಗಳು ನಷ್ಟದಲ್ಲಿ ಇದ್ದರೆ ಮೊದಲು ಹಾಲು ಒಕ್ಕೂಟ, ಶೀತಲೀಕರಣ ಘಟಕ ಹಾಗೂ ಹಾಲು ಸಂಗ್ರಹ ಕೇಂದ್ರಗಳಲ್ಲಿ ಆಗುತ್ತಿರುವ ಸೋರಿಕೆಯನ್ನೇ ತಡೆ ಗಟ್ಟಿದರೆ ಸಾಕು ಎಂದು ಸರ್ಕಾರಕ್ಕೆ ಜೋಶಿ ಟಾಂಗ್ ಕೊಟ್ಟಿದ್ದಾರೆ.ಸರ್ಕಾರ 2 ತಿಂಗಳ ಹಿಂದೆ 2 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿತ್ತು. ಈಗ ಖರೀದಿ ಬೆಲೆ ಕಡಿತಗೊಳಿಸಿ ಉತ್ಪಾದಕರಿಗೂ ಬರೆ ಎಳೆದಿದೆ. ರಾಜ್ಯ ಸರ್ಕಾರ, ಈ ರೀತಿ ಪ್ರೋತ್ಸಾಹ ಧನ ಉಳಿಕೆ, ಖರೀದಿ ದರ ಕಡಿತ, ಮಾರಾಟ ದರ ಹೆಚ್ಚಳ ರೂಪದಲ್ಲಿ ಲೀಟರ್ ಹಾಲಿನ ಮೇಲೆ ಹತ್ತಾರು ರೂಪಾಯಿ ಹೆಚ್ಚುವರಿ ಆದಾಯದ ಮಾರ್ಗ ಕಂಡುಕೊಂಡಿದೆ. ಹೀಗಿರುವಾಗ ನಷ್ಟ ಹೇಗೆಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.
ಹೈನುಗಾರಿಕೆ ಯಾರಿಗೆ ಸ್ವಂತ?
ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದು ಸಣ್ಣಪುಟ್ಟ ರೈತರು ಹೈನುಗಾರಿಕೆಯಿಂದಲೇ ವಿಮುಖರಾಗುವಂತಾಗಿ, ಹೈನುಗಾರಿಕೆ ಪ್ರಭಾವಿಗಳ ಸ್ವತ್ತಾಗಲಿದೆ ಎಂದು ಜೋಶಿ ಎಚ್ಚರಿಸಿದ್ದಾರೆ.ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಓದಿರಿ:
ಶ್ರಾವಣದಲ್ಲಿ ಅಂತ್ಯದಲ್ಲಿ ತುಂಗಾಭದ್ರ ಭರ್ತಿ: ರೈತರ ಮೊಗದಲ್ಲಿ ಮಂದಹಾಸ..!
ವೀರಾವೇಷದಲ್ಲಿ ಎದುರಾಳಿಯನ್ನು ಸೋಲಿಸಿದ ರಾಹುಲ್ ಗಾಂಧಿ; ಏನಿದು ಜಿಯು-ಜಿಟ್ಸು ಸಮರ? ವಿಡಿಯೋ ನೋಡಿ!