spot_img
spot_img

MS DHONI – ಟಿ-ಶರ್ಟ್ ಮೂಲಕ ಫ್ಯಾನ್ಸ್ಗೆ ಶಾಕಿಂಗ್ ನ್ಯೂಸ್ ಕೊಟ್ಟ MS ಧೋನಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

MS Dhoni IPL 2025 NEWS:

ವಿಶ್ವ ಕಂಡ ಶ್ರೇಷ್ಠ ನಾಯಕ ಮತ್ತು ವಿಕೆಟ್​ ಕೀಪರ್​ ಯಾರು ಎಂದರೆ ಥಟ್ಟನೆ ನೆನಪಿಗೆ ಬರುವ ಹೆಸರು MS DHONI.

ಇವರು ಕ್ರಿಕೆಟ್​ನಲ್ಲಿ ನಾಯಕನಾಗಿ ಮಾಡಿರುವ ಸಾಧನೆ ಬೇರೆ ಯಾವೊಬ್ಬ ಆಟಗಾರನಿಗೂ ಸಾಧ್ಯವಾಗುತ್ತಿಲ್ಲ. ಇಂದಿಗೂ ಐಸಿಸಿ ಆಯೋಜಿತ ಎಲ್ಲಾ ಟೂರ್ನಿಗಳನ್ನು ಜಯಿಸಿದ ವಿಶ್ವದ ಏಕೈಕ ನಾಯಕ ಎಂಬ ದಾಖಲೆಯೂ ಥಲಾ ಹೆಸರಲ್ಲಿದೆ. ಜೊತೆಗೆ ಅತ್ಯಂತ ವೇಗದ ಸ್ಟಂಪಿಂಗ್​ ದಾಖಲೆಯನ್ನೂ ಹೊಂದಿದ್ದಾರೆ.

ಸದ್ಯ MS DHONI ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದು ಇಂದಿಗೆ 5 ವರ್ಷಗಳು ಕಳೆದಿವೆ. ಆದರೆ IPLನಲ್ಲಿ ಮುಂದುವರೆದಿದ್ದಾರೆ. ಈ ಹಿಂದೆ ನಾಯಕನಾಗಿದ್ದ MS DHONI ಇದೀಗ ವಿಕೆಟ್​ ಕೀಪರ್​ ಆಗಿ ತಂಡದ ಪರ ಆಡುತ್ತಿದ್ದಾರೆ.

ಇತ್ತೀಚೆಗೆ MS DHONI ಐಪಿಎಲ್​ ನಿವೃತ್ತಿ ಕುರಿತು ಹಲವಾರು ಸುದ್ದಿಗಳು ಹರಿದಾಡುತ್ತಿವೆ. ‘ಇದು MS DHONI ಕೊನೆಯ ಸೀಸನ್’ ಎಂದು ಹೇಳಲಾಗುತ್ತಿದೆ. ಇದರ ನಡುವೆಯೆ ತಮ್ಮ ಕೊನೆಯ ಐಪಿಎಲ್​ ಯಾವಗ ಎಂಬುದರ ಸೂಚನೆ ನೀಡಿದ್ದಾರೆ.

Lucky Captain:

MS DHONI ಶಾಂತ ಸ್ವಭಾವ ಮತ್ತು ನಾಯಕತ್ವಕ್ಕೆ ಹೆಸರುವಾಸಿ ಆಗಿದ್ದಾರೆ. ಇವರು ನಾಯಕತ್ವದಲ್ಲಿ ಭಾರತ ಏಕದಿನ ವಿಶ್ವಕಪ್​, ಟಿ20 ವಿಶ್ವಕಪ್​, ಐಸಿಸಿ ಚಾಂಪಿಯನ್ಸ್​ ಟ್ರೋಫಿಗಳನ್ನು ಗೆದ್ದುಕೊಂಡಿದೆ.

ಇದಲ್ಲದೆ ಐಪಿಎಲ್​ನಲ್ಲೂ MS DHONI ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. 15 ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮುನ್ನಡೆಸಿದ್ದರು. 2010, 2011, 2018, 2021 ಮತ್ತು 2023ರಲ್ಲಿ ಇವರ ನಾಯಕತ್ವದಲ್ಲಿ ಸಿಎಸ್​ಕೆ (CSK) ತಂಡ 5 ಬಾರಿ ಚಾಂಪಿಯನ್​ ಪಟ್ಟಕ್ಕೇರಿತ್ತು.

Uncapped player:

ಕಳೆದ ವರ್ಷ ನಡೆದಿದ್ದ 17ನೇ ಆವೃತ್ತಿಯಲ್ಲಿ MS DHONI ನಾಯಕತ್ವದಿಂದ ಕೆಳಗಿಳಿದಿದ್ದರು. ಸದ್ಯ ಅನ್​ಕ್ಯಾಪ್ಡ್​ ಪ್ಲೇಯರ್​ ಆಗಿ ತಂಡದಲ್ಲಿ ಆಡುತ್ತಿದ್ದಾರೆ. ಧೋನಿ ಬಳಿಕ ರುತುರಾಜ್​ ಗಾಯಕ್ವಾಡ್​ ತಂಡವನ್ನು ಮುನ್ನಡೆಸುತ್ತಿದ್ದಾರೆ.

Shocking news for fans:

ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ MS DHONI ತಾವು ಧರಿಸಿದ್ದ ಟಿ-ಶರ್ಟ್​ ಮೂಲಕ ಸಂದೇಶವೊಂದನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

MS DHONI ಧರಿಸಿರುವ ಟಿ-ಶರ್ಟ್ ಮೇಲೆ ಸ್ಲೋಗನ್​ ಬರೆಯಲಾಗಿದೆ. ಅದರಲ್ಲಿನ ಅಕ್ಷರಗಳು ಟೆಲಿ ಕಮ್ಯುನಿಕೆಷನ್​​ ಮಾರ್ಸ್ ಕೋಡ್​ನಲ್ಲಿವೆ.

ಇದನ್ನು ಡಿಕೋಡ್ ಮಾಡಿದರೆ ‘One Last Time’ ‘ಕೊನೆಯ ಬಾರಿ’ ಎಂಬ ಅರ್ಥ ಬರುತ್ತದೆ ಎಂದು ನೆಟಿಜನ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಅಭಿಮಾನಿಗಳಿಗೆ ಮಾಹಿ ಈ ರೀತಿಯಲ್ಲಿ ನಿವೃತ್ತಿ ಸಂದೇಶ ನೀಡಿದ್ದಾರೆ ಎನ್ನಲಾಗುತ್ತಿದೆ. ಇದರೊಂದಿಗೆ, ಇದು MS DHONI ಯ ಕೊನೆಯ ಐಪಿಎಲ್ ಎಂದು ಹೇಳುವ ಅಭಿಯಾನ ಮತ್ತೆ ಪ್ರಾರಂಭಗೊಂಡಿದೆ.

ಇದನ್ನೂ ಓದಿ:  IPL 2025: Rajasthan Royals Jersey Unveiled At Poornima University

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...