Bangalore NEWS:
GOLD SMUGGLING CASE ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅವರಿಗೆ ಶಿಷ್ಟಾಚಾರ ಸೌಲಭ್ಯ ನೀಡಿರುವ ಸಂಬಂಧ ತನಿಖೆ ನಡೆಸಲು ಹಿರಿಯ IAS ಅಧಿಕಾರಿ ಗೌರವ ಗುಪ್ತಾ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯಗಳು ದುರ್ಬಳಕೆಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ತಿಳಿಸಲಾಗಿದೆ.
Key points in the order:
ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಅಂಶಗಳು ಹಾಗೂ ಸಂದರ್ಭಗಳು.
ಪ್ರಕರಣದಲ್ಲಿ ರಾಜ್ಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ.
ತನಿಖಾಧಿಕಾರಿಗಳು ತನಿಖೆಯನ್ನು ತಕ್ಷಣ ಪ್ರಾರಂಭಿಸಬೇಕು. ತನಿಖಾ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು.
ಮಾಧ್ಯಮಗಳಲ್ಲಿ ರನ್ಯಾ ರಾವ್ ಎಂಬ ಚಿತ್ರನಟಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ. ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮ ಮಾಡಿರುವ ಬಗ್ಗೆ ವರದಿಯಾಗಿದೆ. ಜೊತೆಗೆ, ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ಬಳಸಿಕೊಂಡಿರುವ ಬಗ್ಗೆ, ತಮ್ಮ ತಂದೆ ಐಪಿಎಸ್ ಅಧಿಕಾರಿ ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರಾಮಚಂದ್ರರಾವ್ ಹೆಸರನ್ನು ಬಳಕೆ ಮಾಡಿಕೊಂಡು ಮತ್ತು ಅವರಿಗೆ ನೀಡುವ ಶಿಷ್ಟಾಚಾರ ಸೇವೆಗಳನ್ನು ರನ್ಯಾ ರಾವ್ ದುರ್ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತಪ್ಪಿಸಿಕೊಂಡು ಅಕ್ರಮ ಕೃತ್ಯಗಳನ್ನು ನಡೆಸಿರುವ ಬಗ್ಗೆ ವರದಿಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೀಗಾಗಿ ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಅಂಶಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ, ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಆದೇಶದಲ್ಲಿ ಹೇಳಿದೆ.
Case background:
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 3ರಂದು ಎಮಿರೇಟ್ಸ್ ಏರ್ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು 14.8 ಕೆ.ಜಿ ಚಿನ್ನದ ಸಮೇತ ಡಿಆರ್ಐ ಅಧಿಕಾರಿಗಳು ಬಂಧನ ಮಾಡಿದ್ದರು. ಬಳಿಕ ಮೂರು ದಿನ ಡಿಆರ್ಐ ಅಧಿಕಾರಿಗಳ ಕಸ್ಟಡಿಗೆ ರನ್ಯಾ ರಾವ್ ಅವರನ್ನು ನೀಡಿ ಮಾರ್ಚ್ 7ರಂದು ಕೋರ್ಟ್ ಆದೇಶಿಸಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಸೋಮವಾರ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಬಳಿಕ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.