spot_img
spot_img

ನಟಿ ಶುಭಾ ಪೂಂಜಾಗೂ ಶಾಕ್ : ರೇಣುಕಾಸ್ವಾಮಿ ಕೇಸ್ನಲ್ಲಿ ಹೆಸರು !!!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಹತ್ಯೆ ಕೇಸ್​ ಬಗ್ಗೆ ಪೊಲೀಸ್​ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಮರ್ಡರ್ ಕೇಸ್​ ಸಂಬಂಧ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೂಪನೇ ದರ್ಶನ್ ಅಂಡ್​ ಗ್ಯಾಂಗ್​ನ ಒಂದೊಂದೇ ಕರಾಳ ಮುಖಗಳು ಅನಾವರಣಗೊಳ್ಳುತ್ತಿದೆ.

ದೋಷಾರೂಪ ಪಟ್ಟಿ ದರ್ಶನ್​ ಹಾಗೂ ಪವಿತ್ರ ಗೌಡ ಗ್ಯಾಂಗ್​ ಏನೆಲ್ಲಾ ಪ್ಲಾನ್​ ಮಾಡಿ ಕೊಲೆ ಮಾಡಿದೆ ಎಂಬುವುದರ ಬಗ್ಗೆ ಎಳೆ ಎಳೆಯಾಗಿ ಪೊಲೀಸ್​ರು ಉಲ್ಲೇಖ ಮಾಡಿದ್ದಾರೆ. ಆದರೆ ರೇಣುಕಾಸ್ವಾಮಿ ಪವಿತ್ರಾ ಗೌಡಳಿಗೆ ಕಳುಹಿಸಿದ ಹಾಗೇ ಇಬ್ಬರು ಸ್ಯಾಂಡಲ್​ವುಡ್ ನಟಿಯರಿಗೂ ಅಶ್ಲೀಲ ಮೇಸೇಜ್ ಕಳುಹಿಸಿದ್ದ ಅಂತ ಚಾರ್ಜ್​ಶೀಟ್​ನಲ್ಲಿ ಹೆಸರನ್ನೂ ಕೂಡ ದಾಖಲೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿತ್ತು.

ಎ 14 ಆರೋಪಿ ಪ್ರದೋಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಮೇಸೆಜ್‌ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್​​ಶೀಟ್​ನಲ್ಲಿ ತಿಳಿಸಲಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಫೋನ್ ತೆಗೆದು ಪ್ರದೂಶ್​ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್​ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾನೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.

ಆದರೆ ಇದೇ ವಿಚಾರಕ್ಕೆ ನಟಿ ಶುಭಾ ಪೂಂಜಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ರೇಣುಕಾಸ್ವಾಮಿಯವರ ಮೇಸೆಜ್ ವಿಚಾರವಾಗಿ ಬೆಳಿಗ್ಗೆಯಿಂದ ನನಗೆ ಕರೆ ಮಾಡಿದ ನನ್ನ ಎಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಗೆ ಯಾವುದೇ ಸಂದೇಶಗಳು ಬಂದಿಲ್ಲ ಎಂದಿದ್ದಾರೆ. ಆದರೆ ಈ ಬಗ್ಗೆ ಮತ್ತೊಬ್ಬ ಸ್ಯಾಂಡಲ್​ವುಡ್​ ನಟಿ ಸ್ಪಷ್ಟನೆ ನೀಡಿಲ್ಲ.

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...