spot_img
spot_img

ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶೀಫ್ಟ್ ಮಾಡಿದ್ದು​ ಏಕೆ? ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ಸಿಸಿಬಿ ದಾಳಿ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ವಿಲ್ಸನ್ ಗಾರ್ಡನ್ ನಾಗ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ :Vande Bharat Train: ಹುಬ್ಬಳ್ಳಿ ಮತ್ತು ಪುಣೆ ನಡುವೆ ಒಂದೇ ಭಾರತ್ ರೈಲು!

ಸಿಸಿಬಿ ಅಧಿಕಾರಿಗಳು ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದು, ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ಫೋನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಮೊಬೈಲ್ ಜೊತೆಗೆ ಡ್ರಗ್ಸ್ ಹಾಗೂ ಹಣವನ್ನೂ ಸೀಜ್​ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದರು. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದರು.

ಇದನ್ನೂ ಓದಿ : 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದವರು ಯಾರು ? ಶಾಕಿಂಗ್ ನ್ಯೂಸ್.!

ಕಳೆದ ತಿಂಗಳೂ ಸಿಸಿಬಿ ದಾಳಿ ಮಾಡಿತ್ತು

ಆಗಸ್ಟ್​​​ 24 ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು.

 

ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು. ​ರಾಜಾತಿಥ್ಯ ನೀಡಿರುವ ಫೋಟೋ ವೈರಲ್​ ಆದ ನಂತರ ಜೈಲು ಅಧಿಕಾರಿಗಳು ಆರೋಪಿ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶೀಫ್ಟ್​ ಮಾಡಿದ್ದಾರೆ.

ಇದನ್ನೂ ಓದಿ :ತಪ್ಪೇ ಮಾಡದ ದೇವರವನ್ನು ವಶಕ್ಕೆ ಪಡೆದ ಪೋಲಿಸರು : ಫೋಟೋ ವೈರಲ್‌,!

ದರ್ಶನ್​ ಸಹಚರರನ್ನು ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಕೇಂದ್ರ ಕಾರಾಗೃಹಗಳಿಗೆ ಶಿಫ್ಟ್​​ ಮಾಡಲಾಗಿದೆ. ಸದ್ಯ ದರ್ಶನ್​ ಬಳ್ಳಾರಿ ಜೈಲಿನಲ್ಲಿದ್ದು, ಜಾಮೀನು ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ (Bengaluru Central Jail) ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್​​ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್​ ಜೊತೆ ರೌಡಿಶೀಟರ್​​ ವಿಲ್ಸನ್​​ ಗಾರ್ಡನ್​ ನಾಗ ಕೂಡ ಇದ್ದನು.

 

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...