ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಘೋಷಿಸಿದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಿದಾಡುತ್ತಿದೆ. ಈ ಮಧ್ಯೆ ಸಿಸೋಡಿಯಾ ಇಂದು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿದ್ದು, ಇವರಿಬ್ಬರ ನಡುವಿನ ಸಭೆ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಬಳ್ಳಾರಿಯಲ್ಲಿ ಹೆಚ್ಚಿದ ಭದ್ರತೆ, ಚೆಕ್ ಪೋಸ್ಟ್; ಈದ್ ಮಿಲಾದ್-ಗಣೇಶ ಮೂರ್ತಿ ಮೆರವಣಿಗೆ.!!!
ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಈ ಕುರಿತು ಪಕ್ಷದ ಪದಾಧಿಕಾರಿಯೊಬ್ಬರು ಅಧಿಕೃತ ಮಾಹಿತಿ ನೀಡಿದ್ದು, ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು. ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಭೆ ನಡೆಯಲಿದೆ.
ಇದನ್ನೂ ಓದಿ ;848 ನಿವೇಶನಗಳ ಖಾತೆ ಮತ್ತು ನೋಂದಣಿ ಕಾರ್ಯ 9 ದಿನಗಳಲ್ಲಿ ಪೂರ್ಣಗೊಂಡಿದ್ದು ; ಯಾವುದೇ ಅಕ್ರಮವಾಗಿಲ್ಲ.!
ಅಬಕಾರಿ ನೀತಿ ಪ್ರಕರಣದಲ್ಲಿ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೇಜ್ರಿವಾಲ್, ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಲಿದ್ದು, ತಮ್ಮ ಪಕ್ಷದ ಸಹೋದ್ಯೋಗಿಯೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಅವರ ಹಠಾತ್ ರಾಜೀನಾಮೆ ಘೋಷಣೆಯಿಂದಾಗಿ ಅವರ ಪತ್ನಿ ಸುನೀತಾ, ಸಚಿವರಾದ ಅತಿಶಿ ಮತ್ತು ಗೋಪಾಲ್ ರೈ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬಂತಹ ಮಾತುಗಳು ಕೂಡಾ ಕೇಳಿಬರುತ್ತಿದೆ.