spot_img
spot_img

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ : BJP ಶಾಸಕ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ಇದನ್ನೂ ಓದಿ : 5 ಕೋಟಿ ರೂ.ವೆಚ್ಚದಲ್ಲಿ ಕಾವೇರಿಗೆ ಆರತಿ ಯೋಜನೆ ; ದಸರಾ ಆರಂಭಕ್ಕೆ ಸರ್ಕಾರ ಚಿಂತನೆ..!

ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಎಸ್‌ಐಟಿ ರಚನೆ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕೊಹ್ಲಿಗೆ ಸಿಕ್ಕಷ್ಟು ಅವಕಾಶ ಕೆ.ಎಲ್.ರಾಹುಲ್‌ಗೆ ಸಿಗದಿರಬಹುದು. 2ನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ.!

ಏನಿದು ಪ್ರಕರಣ?

ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್‌ 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...