spot_img
spot_img

ನಟ ದರ್ಶನ್‌ಗೆ  ಜಾಮೀನು ಸಿಗುತ್ತಾ? ಇಲ್ಲವಾ ? ಜಾಮೀನು ಅರ್ಜಿಗಳ ಆದೇಶ ಕಾಯ್ದಿರಿಸಿದ ಕೋರ್ಟ್.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರು ಕೊನೆಗೂ 57ನೇ ಸಿಸಿಹೆಚ್ CCH ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬಂಧನವಾಗಿ 100 ದಿನದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ಇದನ್ನೂ ಓದಿ : ವಂಚನೆ ಮಾಡಿದ ಬ್ಯಾಂಕ್‌ ಸಿಬ್ಬಂದಿಯೂ ಸೇರಿ 14 ಜನರು ; 74 ಕೋಟಿ ರೂಪಾಯಿಗಳು.!

ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್​​ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ ಈ ಅರ್ಜಿಯನ್ನು ವಜಾ ಮಾಡಿತ್ತು. ಇದರಿಂದಾಗಿ ಈಗಲೂ ಪವಿತ್ರಾ ಗೌಡ ಜೈಲಿನಲ್ಲೇ ಇದ್ದಾರೆ. ಇದೀಗ ದರ್ಶನ್ ಕೂಡ ಬೇಲ್​ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಕೋರ್ಟ್​ ಸೋಮವಾರ ಅಂದರೆ ಸೆಪ್ಟೆಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ. ಸದ್ಯ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ.

ಆರೋಪಿ ಪರ ವಕೀಲ ರಂಗನಾಥ ರೆಡ್ಡಿ ಅವರು ವಾದ ಮಂಡಿಸಿದರು. ಒಂದು ವೇಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆ.436 ಅಡಿ ಅರ್ಜಿ ಪರಿಗಣಿಸದಿದ್ದರೆ ಸೆಷನ್ಸ್ ಕೋರ್ಟ್​ಗೆ ಅರ್ಜಿ ಸಲ್ಲಿಸಬೇಕು. ಹೀಗಾಗಿ ಸಿಆರ್​​ಪಿಸಿ 439ರ ಅಡಿ ಸೆಷನ್ಸ್ ಕೋರ್ಟ್ ಪರಿಗಣಿಸಬೇಕು. ಆರೋಪಿಗಳ ವಿರುದ್ಧ ನಾನ್ ಬೇಲೆಬಲ್ ಸೆಕ್ಷನ್ ಅಡಿ ಆರೋಪ ಇದೆ. ನಿರೀಕ್ಷಣಾ ಜಾಮೀನು ವಿಚಾರದಲ್ಲಿ ಮಾತ್ರ ಸೆ.436 ಅಡಿ ಅಪ್ಲೇ ಆಗತ್ತದೆ. ಆಗ ಮಾತ್ರ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಬಹುದು. ಆದ್ರೆ ಸೆ.439ರ ಅಡಿ ರೆಗ್ಯೂಲರ್ ಬೇಲ್​ ಅನ್ನ ಸೆಷನ್ಸ್ ನೀಡಬಹುದು. ಹೀಗಾಗಿ ಜಾಮೀನು ಅರ್ಜಿಯನ್ನ ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿ ಆದೇಶಿಸಬೇಕು ಎಂದು ವಕೀಲ ರಂಗನಾಥ ರೆಡ್ಡಿ ಕೋರ್ಟ್​​ಗೆ ಮನವಿ ಮಾಡಿದರು.

ಇದನ್ನೂ ಓದಿ : ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ : BJP ಶಾಸಕ.!

ಬೇಲ್​​ ಆರೋಪ ಇರುವ 3 ಆರೋಪಿಗಳಿಗೆ ಮಾತ್ರ ಈ ಅವಕಾಶ ಇದೆ. ಉಳಿದ ಆರೋಪಿಗಳ ಅರ್ಜಿ ವಿಚಾರಣೆ ವೇಳೆ ಇನ್ನುಳಿದಿದ್ದನ್ನು ವಾದಿಸಲಾಗುವುದು. ಚಾರ್ಜ್​ಶೀಟ್​​ನಲ್ಲಿರುವ ಸಂಪೂರ್ಣ ಮಾಹಿತಿ ಆಧರಿಸಿ ವಾದಿಸುತ್ತೇನೆ ಎಂದು ಕೋರ್ಟ್​ಗೆ ವಕೀಲರು ಹೇಳಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ಕೋರ್ಟ್​ ಸೋಮವಾರಕ್ಕೆ ಜಾಮೀನು ಅರ್ಜಿಗಳ ಆದೇಶ ಕಾಯ್ದಿರಿಸಿದೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...

GOLD SMUGGLING CASE – ಏರ್ಪೋರ್ಟ್ನಲ್ಲಿ ಶಿಷ್ಟಾಚಾರ ಸೌಲಭ್ಯ ದುರ್ಬಳಕೆ; ರನ್ಯಾ ರಾವ್ ಪ್ರಕರಣದ ತನಿಖೆಗೆ ಹಿರಿಯ IAS ಅಧಿಕಾರಿ ನೇಮಕ

Bangalore NEWS: GOLD SMUGGLING CASE ಪ್ರಕರಣದ ಆರೋಪಿ ನಟಿ ರನ್ಯಾ ರಾವ್​​ ಅವರಿಗೆ ಶಿಷ್ಟಾಚಾರ ಸೌಲಭ್ಯ ನೀಡಿರುವ ಸಂಬಂಧ ತನಿಖೆ ನಡೆಸಲು ಹಿರಿಯ IAS...