spot_img
spot_img

ದೇವೇಗೌಡರನ್ನು ಭೇಟಿಯಾದ ಮೋದಿ.. ಮಹತ್ವದ ಚರ್ಚೆ; HDD ಕೊಟ್ಟ ಗಿಫ್ಟ್‌ಗೆ ಪ್ರಧಾನಿ ಸಂತಸ; ಏನದು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ ನಾಯಕರು ಉಗ್ರ ಹೋರಾಟ ನಡೆಸುತ್ತಿದ್ದಾರೆ. ವಾಲ್ಮೀಕಿ ಬಹುಕೋಟಿ ಹಗರಣ, ಮುಡಾ ಅಕ್ರಮ ಸೈಟು ಹಂಚಿಕೆ ಆರೋಪದಲ್ಲಿ ಕಾಂಗ್ರೆಸ್‌ ಮೇಲೆ ಕೆಂಡಕಾರುತ್ತಿದ್ದಾರೆ. ರಾಜ್ಯದಲ್ಲಿ ಜಿದ್ದಾಜಿದ್ದಿನ ರಾಜಕೀಯ ನಡೆಯುತ್ತಿರುವಾಗಲೇ ದೆಹಲಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ 7, ಲೋಕ ಕಲ್ಯಾಣ್‌ ಮಾರ್ಗ್‌ನಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.
ಈ ಬಗ್ಗೆ ಖುದ್ದು ಮಾಹಿತಿ ಹಂಚಿಕೊಂಡಿರುವ ಮೋದಿ ಅವರು ದೇವೇಗೌಡ ಅವರ ಜೊತೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆಸಿದ್ದೇನೆ. ವಿವಿಧ ವಿಷಯಗಳ ಬಗ್ಗೆ ಅವರ ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ಮೌಲ್ಯಯುತವಾಗಿದೆ ಎಂದು ಕೊಂಡಾಡಿದ್ದಾರೆ.

ಇದೇ ವೇಳೆ ಹೆಚ್‌.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಮೋದಿ ಅವರು ಧ್ಯಾನ ಮಾಡುತ್ತಿರುವ ಚಿತ್ರವನ್ನು ಹೆಚ್‌ಡಿಡಿ ಪ್ರಧಾನಿಗೆ ಕೊಟ್ಟಿದ್ದಾರೆ. ಇದನ್ನು ನೋಡಿದ ಮೋದಿ ಅವರು ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಕಲಾಚಿತ್ರವನ್ನು ನೋಡಿ ಇತ್ತೀಚೆಗೆ ನಾನು ಕನ್ಯಾಕುಮಾರಿಯಲ್ಲಿ ಮಾಡಿದ ಧ್ಯಾನವೇ ನೆನಪಾಯಿತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಗುಡುಗಿದ್ದ ದೇವೇಗೌಡರು!
ಮಾಜಿ ಪ್ರಧಾನಿ ದೇವೇಗೌಡರು ನಿನ್ನೆಯಷ್ಟೇ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ಹೊಗಳಿದ್ದರು. ಅಲ್ಲದೇ ಕರ್ನಾಟಕದಲ್ಲಿರುವ ರಾಜ್ಯ ಸರ್ಕಾರ ಏನು ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಗುಡುಗಿದ್ದರು. ಇದಾದ ಬಳಿಕ ಪ್ರಧಾನಿ ಮೋದಿ ಅವರನ್ನು ಹೆಚ್‌.ಡಿ ದೇವೇಗೌಡ ಹಾಗೂ ಹೆಚ್‌.ಡಿ ಕುಮಾರಸ್ವಾಮಿ ಅವರು ಭೇಟಿಯಾಗಿ ಮಹತ್ವದ ಮಾತಕತೆ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...