ಮಕ್ಕಳ ಅಶ್ಲೀಲತೆಗೆ ಸಂಬಂಧಿಸಿದ ಫೋಟೋ, ವಿಡಿಯೋ ಡೌನ್‌ಲೋಡ್ ಮಾಡುವುದು, ನೋಡುವುದು ಹಾಗೂ ಹೊಂದಿರುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ಮಿಸ್ ಯೂನಿವರ್ಸ್ ಇಂಡಿಯಾ : 19 ವರ್ಷದ ಯುವತಿ ಈ ಚೆಂದುಳ್ಳಿ ಚೆಲುವೆ ಯಾರು?
ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇಂತಹ ಫೋಟೋ, ವಿಡಿಯೋವನ್ನು ಹೊಂದಿರುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಂಡಿದ್ದಾನೆ ಎಂದು ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಡೌನ್‌ಲೋಡ್ ಮಾಡಿಕೊಂಡಿದ್ದ ವ್ಯಕ್ತಿ ಬೇರೆಯವರಿಗೆ ಕಳುಹಿಸಿರಲಿಲ್ಲ ಎಂದು ಪೋಕ್ಸ್ ಪ್ರಕರಣವೆಂದು ಪರಿಗಣಿಸಿರಲಿಲ್ಲ.
ಇದನ್ನೂ ಓದಿ : ತಿರುಪತಿ ತಿರುಮಲ ದೇವಸ್ಥಾನ ಶುದ್ದೀಕರಣ, ಶಾಂತಿ ಹೋಮ!
ಮದ್ರಾಸ್ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಅಲೈಯನ್ಸ್ ಎಂಬ ಎನ್‌ಜಿಒ ಸುಪ್ರೀಂಗೆ ಅರ್ಜಿ ಹಾಕಿತ್ತು. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಅಪರಾಧ ಎಂದು ಮದ್ರಾಸ್ ಹೈಕೋರ್ಟ್ ಪರಿಗಣಿಸಿಲ್ಲ. ವ್ಯಕ್ತಿಯೊಬ್ಬರು ತಮ್ಮ ಎಲೆಕ್ಟ್ರಾನಿಕ್ ಸಾಧನದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿತ್ತು. ಮದ್ರಾಸ್ ಹೈಕೋರ್ಟ್ ಇದನ್ನು ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಿರಲಿಲ್ಲ.
ಇದನ್ನೂ ಓದಿ : ತುಂಗಭದ್ರಾ ಜಲಾಶಯದ ಬಗ್ಗೆ ಡಿಕೆ.ಶಿವಕುಮಾರ್ ಹೇಳಿದ್ದೆನು.!
ಇದೀಗ ಸುಪ್ರೀಂ ಕೋರ್ಟ್ ಅದು ದೊಡ್ಡ ಅಪರಾಧ ಎಂದಿದೆ. ಮಕ್ಕಳ ಪೋರ್ನೋಗ್ರಫಿ ಪದವನ್ನು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಸ್ತು (CSAEM : child sexually abusive and exploitative material) ನೊಂದಿಗೆ ಬದಲಾಯಿಸುವ ಮೂಲಕ POCSO (Protection of Children from Sexual Offences. ) ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.