spot_img
spot_img

ಸವದತ್ತಿಯಲ್ಲಿ ಪೂಜೆ: ದೇವಿ ದರ್ಶನ, ಪ್ರಾರ್ಥಿಸಿಕೊಂಡ ಸಿಎಂ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಶ್ರೀರೇಣುಕಾ ಯಲ್ಲಮ್ಮದೇವಿ ದರ್ಶನ‌ ಪಡೆದ ಸಿಎಂ ಸಿದ್ದರಾಮಯ್ಯ ಅವರು, ದೇವಿಗೆ ಲಿಂಬೆ ಹಣ್ಣು ಅರ್ಪಿಸಿ, ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಅರ್ಚನೆ ಮಾಡಿಸಿ ಪ್ರಾರ್ಥಿಸಿದರು.

ಯಲ್ಲಮ್ಮಗುಡ್ಡಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ವಾದ್ಯ ಮೇಳಗಳೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ಮುಖ್ಯದ್ವಾರದಲ್ಲಿ ಅರ್ಚಕ ಯಡಿಯೂರಪ್ಪ ಅವರು ಗಣ್ಯರಿಗೆ ಲಿಂಬೆ ಹಣ್ಣು ನೀಡಿದರು. ಅವುಗಳನ್ನು ಕೈಯಲ್ಲಿ ಹಿಡಿದುಕೊಂಡೇ ದೇವಸ್ಥಾನ ಪ್ರವೇಶಿಸಿದರು. ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಅರ್ಚಕರು ನೀಡಿದ ಲಿಂಬೆಹಣ್ಣುಗಳನ್ನು ಗರ್ಭಗುಡಿಯಲ್ಲಿನ ಅರ್ಚಕರಿಗೆ ನೀಡಿ ಸಿದ್ದರಾಮಯ್ಯ ಹಾಗೂ ಧನಿಷ್ಠಾ ನಕ್ಷತ್ರ ಪಾರ್ವತಿ ಅವರ ಹೆಸರಲ್ಲಿ ಅರ್ಚನೆ ಮಾಡಿದದರು. ಉಭಯ ನಾಯಕರಿಗೆ ನಾಗಮೂರ್ತಿ ಕಿರಿಟದಿಂದ ಆಶೀರ್ವದಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಷ್ಟಾಂಗ ನಮಸ್ಕಾರ ಹಾಕಿದರು. ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಡಿ.ಕೆ.ಶಿವಕುಮಾರ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಸಭೆಯ ಪ್ರಮುಖಾಂಶಗಳು:

*ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು.

*ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು, ವಿದ್ಯುತ್, ಉಳಿಯಲು ಅಚ್ಚುಕಟ್ಟುತನದ ವ್ಯವಸ್ಥೆಯನ್ನು ಕಲ್ಪಿಸಬೇಕು. ತಿರುಪತಿ ಮಾದರಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು.

*ಸಮರ್ಪಕ ವ್ಯವಸ್ಥೆ ಕಲ್ಪಿಸಿ ದೇವಿಯ ದರ್ಶನದ ಖಾತ್ರಿ ಆದರೆ ಭಕ್ತರು ಮತ್ತು ಪ್ರವಾಸಿಗರ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದರು.

*ತಾಯಿ ಯಲ್ಲಮ್ಮ ದರ್ಶನಕ್ಕೆ ಬಡವರು, ಶ್ರಮಿಕರು, ತಳ ಸಮುದಾಯದವರು, ಮಹಿಳೆಯರು ಮತ್ತು ದುಡಿಯುವ ವರ್ಗದವರೇ ಹೆಚ್ಚಾಗಿ ಬರುವ ಕ್ಷೇತ್ರ ಇದು.

*ಸೌಕರ್ಯ ಅಚ್ಚುಕಟ್ಟಾಗಿದ್ದರೆ ಕ್ಷೇತ್ರದ ಆದಾಯವೂ ಹೆಚ್ಚಾಗುತ್ತದೆ. ಈ ಆದಾಯದಿಂದ ಭಕ್ತರಿಗೆ ಇನ್ನೂ ಹೆಚ್ಚಿನ ಮೂಲಭೂತ ಸವಲತ್ತು ಒದಗಿಸಬಹುದು.

*ಕ್ಷೇತ್ರ ಆಕರ್ಷಣೀಯವಾಗಿರಬೇಕು.

*ಎತ್ತಿನಗಾಡಿಯಲ್ಲಿ ಅತಿ ಹೆಚ್ಚು ಪ್ರಮಾಣದ ಭಕ್ತರು ಆಗಮಿಸುವುದರಿಂದ ಕಾರು, ಬೈಕುಗಳ ಜೊತೆಗೆ ಎತ್ತಿನಗಾಡಿ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಬೇಕು. ಎತ್ತು, ಹಸುಗಳಿಗೆ ಉತ್ತಮ ಮೇವು-ನೀರು-ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಕಾರ್ಯಯೋಜನೆ ರೂಪಿಸಬೇಕು.

*ಪ್ರತೀ ವರ್ಷ 1.5 ರಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆಯನ್ನು ರೂಪಿಸಬೇಕು.

*ಕ್ಷೇತ್ರಕ್ಕೆ ಸೇರಿದ ಜಾಗ, ಜಮೀನನ್ನು ಮೊದಲು ಗುರುತಿಸಿ, ಒತ್ತುವರಿ ಆಗಿದ್ದರೆ ಬಿಡಿಸಿಕೊಳ್ಳಬೇಕು. ಸ್ಥಳದ ಸುತ್ತ ಕಾಂಪೌಂಡ್, ಫೆನ್ಸಿಂಗ್ ಹಾಕಿ ಜಾಗದ ಭದ್ರತೆ ಮಾಡಿಕೊಳ್ಳಬೇಕು.

*ಭಕ್ತರು ಬರುವ ದೇವಸ್ಥಾನದ ಮಾರ್ಗ ಮತ್ತು ಸುತ್ತಲ ಪ್ರದೇಶಗಳಲ್ಲಿ ಹಾಗೂ ಭಕ್ತರು ಉಳಿಯುವ ಜಾಗದಲ್ಲಿ ಬೀದಿ ದೀಪ, ವಿದ್ಯುತ್ ಸೌಲಭ್ಯ ಒದಗಿಸಬೇಕು.

*ರೋಪ್ ವೇ ಸವಲತ್ತು ಕಲ್ಪಿಸುವುದರಿಂದ ಅನುಕೂಲ ಆಗುತ್ತದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ಎನ್ನುವ ಸೂಚನೆಯನ್ನು ನೀಡಿದರು.

ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಅನಕ್ಷರಸ್ಥರಿಗೆ ಅಕ್ಷರ : ನಾರಾಯಣ ಸ್ವಾಮಿ

ಚಿಂತಾಮಣಿಯ ಶಿಕ್ಷಕ ಡಾ. ಆರ್‌. ನಾರಾಯಣಸ್ವಾಮಿ ತಮ್ಮ ಶಿಕ್ಷಕ ವೃತ್ತಿಯ ಜತೆಗೆ ಸಮಾಜದಲ್ಲಿನ ಅಸಂಖ್ಯಾತ ಅನಕ್ಷರಸ್ಥರರನ್ನು ಸಾಕ್ಷರನ್ನಾಗಿ ಮಾಡುವ ಹಾಗೂ ಶಾಲೆ ಸಮುದಾಯದಕ್ಕೆ ನೈರ್ಮಲ್ಯದ...

ಮೊಟ್ಟೆ-ಬಾಳೆಹಣ್ಣು ವಿತರಣೆ : ಶಿಕ್ಷಕರ ಅಮಾನತು

ಕಲಬುರಗಿ: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚೆಕ್ಕಿ ವಿತರಿಸುವ ಜವಾಬ್ದಾರಿ ಮುಖ್ಯ ಶಿಕ್ಷಕರ ಮತ್ತು...

ಬಿಜೆಪಿಯ ಭರತ್ ಬೊಮ್ಮಾಯಿ ಮುನ್ನಡೆ ಸಾಧನೆ

ಶಿಗ್ಗಾಂವ : ವಿಧಾನಸಭಾ ಉಪಚುನಾವಣೆ ಫಲಿತಾಂಶ 2024 ಶನಿವಾರದಂದು ಬಿಗುವಿನ ಪರಾಕಾಷ್ಠೆಯನ್ನು ತಲುಪಿದ್ದು, 7ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ...

By-election : 2024 ರ ಕರ್ನಾಟಕ ಉಪ-ಚುನಾವಣೆ ಫಲಿತಾಂಶ

ಚೆನ್ನಪಟ್ಟಣ: ಸಂಡೂರು, ಶಿಗ್ಗಾಂವ ಮತ್ತು ಚನ್ನಪಟ್ಟಣ ಕ್ಷೇತ್ರಗಳು ಲಭ್ಯವಾಗಿ ಹಿಂದಿನ ಪ್ರತಿನಿಧಿಗಳು ಮೇ ತಿಂಗಳಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಈ ಚುನಾವಣಾ ಕದನವು ಪ್ರಾರಂಭವಾಯಿತು. ಕಾಂಗ್ರೆಸ್‌ನಿಂದ...