ಬೆಂಗಳೂರು: 2024-25ನೇ ಸಾಲಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯ ಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ವೆಬ್‌ಪೋರ್ಟಲ್ ಮೂಲಕ 2025ರ ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು 2024 ರ ಫೆಬ್ರವರಿ 15 ರಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಕಾಶಿಗೆ ಪ್ರಯಾಣಿಸಿದ ಕುರಿತು ಟಿಕೆಟ್, ಕಾಶಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಗ್ಗೆ ದೇವಾಲಯದ ಮುಂಬದಿಯಲ್ಲಿ ಯಾತ್ರಾರ್ಥಿಗಳ ಛಾಯಾಚಿತ್ರ, ಪೂಜಾ ರಸೀದಿ ಇತ್ಯಾದಿ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಒಬ್ಬ ವ್ಯಕ್ತಿಗೆ ಒಂದು ಬಾರಿ ಮಾತ್ರ ಸಹಾಯಧನ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಕಾಶಿಯಾತ್ರೆ ಕೈಗೊಳ್ಳುವವರಿಗೆ 5,000 ದಿಂದ 7,500 ರೂ. ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ರಾಜ್ಯ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದರು. ಆದರೆ 5 ಸಾವಿರ ರೂ ಸಹಾಯ ಧನ ನೀಡುವುದಾಗಿ ಅರ್ಜಿ ಆಹ್ವಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.