ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ಅನುಕೂಲ ಪ್ರತಿ ಕುಟುಂಬದ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಯ ಸಾಕಷ್ಟು ಸಕ್ಸಸ್ ಸ್ಟೋರಿಗಳು ಗಮನ ಸೆಳೆಯುತ್ತಿದೆ.
ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ ಎಂದು ಆಶಿಸಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು.
ವಿಜಯ ದಶಮಿ ಆಯುಧ ಪೂಜೆ ದಿನದಂದು ಶೋ ರೂಮಿನಿಂದ ಬೈಕ್ ಖರೀದಿಸಿ, ಪೂಜೆ ಮಾಡಿ ಸಂಭ್ರಮಿಸಿದ್ದರು.
ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಗೃಹಲಕ್ಷ್ಮೀ ಹಣದಿಂದ ಬೈಕ್ ಕೊಡಿಸಿದ ತಾಯಿ -ಮಗನಿಗೆ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದರು.