spot_img
spot_img

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಶ್ರೀನಗರ:  ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು, ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಗುಲಾಮ್ ಅಹ್ಮದ್ ಮಿರ್ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಕ ಮಾಡಿದೆ.

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯ ಗಳಿಸಿತ್ತು.

42 ಮಂದಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು, ನಾಲ್ವರು ಪಕ್ಷೇತರರು, ಕಾಂಗ್ರೆಸ್ ಪಕ್ಷದ ಆರು ಮಂದಿ ಹಾಗೂ ಸಿಪಿಐ(ಎಂ)ನ ಒಬ್ಬ ಶಾಸಕರ ಬೆಂಬಲ ತಮಗಿದೆ ಎಂದು ಅಬ್ದುಲ್ಲಾ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಒಟ್ಟು 90 ಸ್ಥಾನಗಳಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದಿದ್ದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

ಚುನಾವಣಾ ಪೂರ್ವ ಮೈತ್ರಿಕೂಟದಿಂದ 49 ಶಾಸಕರಿದ್ದು, ಐವರು ಸ್ವತಂತ್ರ ಶಾಸಕರು ಕೂಡ ಒಮರ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ, ಆಮ್​ ಆದ್ಮಿ ಪಕ್ಷವು ಕೂಡ ಬೆಂಬಲ ನೀಡಿದೆ. ಮೆಹಬೂಬಾ ಮುಫ್ತಿ ಅವರ ಪಕ್ಷವಾದ ಪಿಡಿಪಿ ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಆದಷ್ಟು ಬೇಗ ಭಾರತಕ್ಕೆ ಕಾಲಿಡಲಿದೆ ರೆಡ್​ಮಿ ನೋಟ್​ 14 ಸೀರಿಸ್

Redmi Note 14 5G Series: ಆದಷ್ಟು ಬೇಗ ರೆಡ್​ಮಿ ನೋಟ್​ 14 ಸೀರಿಸ್​ ಭಾರತಕ್ಕೆ ಕಾಲಿಡಲಿದೆ. ಈ ಬಗ್ಗೆ ಕಂಪನಿ ಅಧಿಕೃತವಾಗಿ ಮಾಹಿತಿ...

ವಾಯು ಮಾಲಿನ್ಯ ರಾಷ್ಟ್ರೀಯ ತುರ್ತು ಪರಿಸ್ಥಿತಿ, ಸಂಸತ್ತಿನಲ್ಲಿ ಚರ್ಚೆಯಾಗಲಿ: ರಾಹುಲ್ ಗಾಂಧಿ

ನವದೆಹಲಿ: ಉತ್ತರ ಭಾರತದಲ್ಲಿನ ವಾಯುಮಾಲಿನ್ಯವು ರಾಷ್ಟ್ರೀಯ ತುರ್ತು ಪರಿಸ್ಥಿತಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಉತ್ತರ ಭಾರತದಲ್ಲಿನ ವಾಯುಮಾಲಿನ್ಯವು ರಾಷ್ಟ್ರೀಯ ತುರ್ತು ಪರಿಸ್ಥಿತಿಯಾಗಿದೆ ಎಂದು ಪ್ರತಿಪಾದಿಸಿದ...

Bigg Boss ಮನೆಯಲ್ಲಿ ಒಂಬತ್ತನೇ ಅದ್ಭುತ: ಮತ್ತೆ ಒಂದಾದ ಮಂಜಣ್ಣ – ತ್ರಿವಿಕ್ರಮ್, ಈ ಬಾರಿ ಹೊಸ ಒಪ್ಪಂದ!

ದಿನಗಳು ಉರುಳಿದಂತೆ ‘ಬಿಗ್ ಬಾಸ್’ ಮನೆಯಲ್ಲಿ ಸ್ಪರ್ಧೆಯ ಕಾವೇರುತ್ತಿದೆ. ಹೀಗಿರುವಾಗಲೇ, ತೊಡೆ ತಟ್ಟಿ ನಿಂತಿದ್ದ ತ್ರಿವಿಕ್ರಮ್ ಹಾಗೂ ಮಂಜು ಕೈಜೋಡಿಸಿಬಿಟ್ಟಿದ್ದಾರೆ. ಹೊಸ ಒಪ್ಪಂದಕ್ಕೆ ನಾಂದಿ...

ರೋಗಗಳಿಂದ ಕಂಗೆಟ್ಟಿದ್ದ ಮಲೆನಾಡಿನ ರೈತರಲ್ಲಿ ಆಶಾಕಿರಣ: ಭರವಸೆ ಮೂಡಿಸಿದ ಮಂಗಳ ಅಡಕೆ

ಶೃಂಗೇರಿ: ಹಳದಿ ಎಲೆ. ಬೇರು ಹುಳ, ಎಲೆ ಚುಕ್ಕಿ ರೋಗ ಹೀಗೆ ಮಲೆನಾಡಿನ ಅಡಕೆ ಬೆಳೆಗಾರರು ಕಳೆದ ಕೆಲವು ವರ್ಷಗಳಿಂದ ಸಾಲು ಸಾಲು ರೋಗ...