ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿ-ದಿಶಾ ಸಭೆ ನಡೆಯಿತು.
ಈ ವೇಳೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮತ್ತು ರೈತರ ಸಮಸ್ಯೆಗಳ ಪರಿಹಾರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಶಾಸಕರಾದ ಹೆಚ್.ಡಿ ತಮ್ಮಯ್ಯ, ನಯನಾ ಮೋಟಮ್ಮ ಸೇರಿದಂತೆ ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.