ಬೆಂಗಳೂರು: ರಾಜ್ಯದಲ್ಲಿ ಮಳೆ ಜಾಸ್ತಿಯಾಗಿ ರಸ್ತೆ ತುಂಬಾ ನೀರಿನ ಹರಿಯುವುದು ಬೈಕ್ಗಳು ಮುಳುಗುವುದು ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು ಇವೆಲ್ಲ ದೃಶ್ಯಗಳು ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿದ್ದಾರೆ.
ಅತಿ ಹೆಚ್ಚು ಮಳೆಯಿಂದ ಹೆಚ್ಎಸ್ಆರ್ ಲೇಔಟ್ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಗಿ 10ಕ್ಕೂ ಹೆಚ್ಚು ಬಸ್ಗಳು ಮುಳುಗಡೆಯಾಗಿವೆ. ಶಾಲೆ ಹೊರಗೆ ನಿಂತಿರುವ ಬಸ್ಗಳು ಕೂಡ ನೀರುಪಾಲಾದವು.
ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿ ನಿವಾಸಿಗಳ ಬದುಕೇ ನರಕಮಯವಾಗಿದೆ.
ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ನೆಟ್ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡು ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್ಗೆ ಶಾಸಕ ನಂದೀಶ್ ರೆಡ್ಡಿ ಸಾಥ್ ನೀಡಿದರು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now