ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಜೋರಾಗಿದೆ. ಚಿತ್ರದುರ್ಗದಲ್ಲಂತೂ ವರುಣನ ಅಬ್ಬರಕ್ಕೆ ಇಡೀ ಪೊಲೀಸ್ ಠಾಣೆ ಸಂಪೂರ್ಣ ಜಲಾವೃತವಾಗಿದೆ. ಇನ್ನೂ ಮೂರು ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಠಾಣೆ ಕೆರೆಯಾಂತಾಗಿದ್ದು ಎಲ್ಲ ದಾಖಲೆಗಳು ನೀರುಪಾಲಾಗಿವೆ.
ಉಕ್ಕಿ ಹರಿಯುವ ನೀರಿನ ಮಧ್ಯೆ ಟ್ರ್ಯಾಕ್ಟರ್ ಸಿಲುಕಿಕೊಂಡು. ಟ್ರ್ಯಾಕ್ಟ ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ
ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ಭರ್ತಿಯಾಗಿದೆ.
ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಿದ ಹಿನ್ನಲೆಯಲ್ಲಿ ಡ್ಯಾಂಗೆ ಒಳಹರಿವು ಹೆಚ್ಚಿದೆ.
ಅರಮನೆ ನಗರಿ ಮೈಸೂರಲ್ಲೂ ಕೂಡ ಮಳೆ ಅಬ್ಬರಕ್ಕೆ ಕಂಗಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬಹುತೇಕ ಪ್ರಮುಖ ರಸ್ತೆಗಳ ಜಲಾವೃತವಾಗಿದೆ. ಮಂಡಿಯುದ್ದ ನೀರು ನಿಂತಿದ್ದು, ಸವಾರರು ಪರದಾಡುವಂತಾಗಿದೆ. ಹಲವೆಡೆ ಮರಗಳು ಧರಾಶಾಹಿ ಆಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಬೆಂಗಳೂರಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಬಿಟ್ಟು ಬಿಡದೇ ಸುರಿದ ಮಳೆಗೆ ಇಡೀ ನಗರ ಮುಳುಗಿ ಹೋಗಿದೆ.
ಯಲಹಂಕದ ಬಹುತೇಕ ಕೆರೆಗಳು ತುಂಬಿವೆ, ಬೋಟ್‌ಗಳ ಮೂಲಕ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿದೆ.
ಇನ್ನೂ ಮೂರು-ನಾಲ್ಕು ದಿನ ಮಳೆ ಇದೆ ಅನ್ನೋದು ಜನರನ್ನು ಮತ್ತಷ್ಟು ಕಂಗೆಡಿಸಿದೆ ಎಂದು ವರದಿ ತಿಳಿಸುತ್ತಿದೆ.