spot_img
spot_img

ನ.1 ರೊಳಗೆ `ಗುರುತಿನ ಚೀಟಿ’ಗೆ ಕೆಂಪು-ಹಳದಿ ಬಣ್ಣದ ‘ಟ್ಯಾಗ್’ ಕಡ್ಡಾಯ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದ್ದಾರೆ.
ನೂತನ ಕೊರಳುದಾರದ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ನ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಮಣಿಪುರದಲ್ಲಿ ಇನ್ನೂ ಮೂರು ದಿನ ಮೊಬೈಲ್ ಇಂಟರ್ನೆಟ್ ನಿಷೇಧ

ಇಂಫಾಲ್: ನವೆಂಬರ್ 16 ರಂದು, ಸರ್ಕಾರ, ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಿತ್ತು. ಮಣಿಪುರ ಸರ್ಕಾರವು ಬುಧವಾರ ಮೊಬೈಲ್ ಇಂಟರ್ನೆಟ್ ಸೇವೆ ಅಮಾನತು ಆದೇಶವನ್ನು...

ಬಿಗ್ ಬಾಸ್ ಮನೆಯಲ್ಲಿ ಒಂದೇ ಟಾಸ್ಕ್​ನಲ್ಲೇ ವೀಕ್ಷಕರ ಹೃದಯ ಗೆದ್ದ ಶೋಭಾ ಶೆಟ್ಟಿ

ಕನ್ನಡದ ಬಿಗ್​ಬಾಸ್​ ಸೀಸನ್​ 11ರ ಆಟದ ಕಿಚ್ಚು ಜೋರಾಗಿ ಹೊತ್ತಿ ಉರಿಯುತ್ತಿದೆ. ಕನ್ನಡ ಬಿಗ್​ಬಾಸ್​ನಲ್ಲಿ​ ಇತಿಹಾಸದಲ್ಲೇ ಬಂದ ಮೊದಲ ದಿನನೇ ಯಾವ ವೈಲ್ಡ್​ ಕಾರ್ಡ್...

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೇ. 20ರಷ್ಟು ಸೇವಾ ಶುಲ್ಕ ಹೆಚ್ಚಳ

ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ...

20 ಬೋಗಿಗಳ ಹೊಸ ವಂದೇ ಭಾರತ್‌ ರೈಲು; ಕರ್ನಾಟಕದ ಈ ಮಾರ್ಗದಲ್ಲಿ ಸಂಚಾರ

ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್‌ ರೈಲು ಓಡಿಸಲು ನಿರ್ಧರಿಸಲಾಗಿದೆ. ಮಂಗಳೂರು-ತಿರುವನಂತಪುರ ವಂದೇ ಭಾರತ್‌...